32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆಯು ಜೂ.10 ರಂದು ವಲಯದ ಅಧ್ಯಕ್ಷೆ ವಸಂತಿ ಲಕ್ಷ್ಮಣ್ ಇವರ ಅಧ್ಯಕ್ಷತೆಯಲ್ಲಿ ಮಡಂತ್ಯಾರು ಮಹಿಳಾ ಮಂಡಲ ಕಟ್ಟಡದಲ್ಲಿ ಜರಗಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಟೈಲರ್ಸ್ ಅಸೋಸಿಯೇಷನ್ ಅಧ್ಯಕ್ಷೆ ವಿದ್ಯಾ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ಜಯಂತ್ ಉರ್ಲಾಂಡಿ, ಕ್ಷೇತ್ರ ಸಮಿತಿ ಅಧ್ಯಕ್ಷೆ ವೇದಾವತಿ ಜನಾರ್ಧನ್, ಕಾರ್ಯದರ್ಶಿ ನಾಗೇಶ್, ಜಿಲ್ಲಾ ಉಪಾಧ್ಯಕ್ಷೆ ಶಾಂಭವಿ ಪಿ ಬಂಗೇರ, ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪ ನವೀನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರಾಧ್ಯಕ್ಷರಾಗಿ ಲಿಂಗಪ್ಪ ಟೈಲರ್ ಪುಂಜಾಲಕಟ್ಟೆ, ಅಧ್ಯಕ್ಷರಾಗಿ ವಸಂತಿ ಲಕ್ಷ್ಮಣ್ ಅವರು ಪುನರಾಯ್ಕೆಗೊಂಡರು. ಕಾರ್ಯದರ್ಶಿಯಾಗಿ ಸುಮಲತಾ, ಕೋಶಾಧಿಕಾರಿಯಾಗಿ ಸವಿತಾ, ಉಪಾಧ್ಯಕ್ಷರಾಗಿ ಜಾರಪ್ಪ ಟೈಲರ್ ಬಳ್ಳಮಂಜ, ಹಾಗೂ ಕ್ಷೇತ್ರ ಸಮಿತಿಗೆ ಶಶಿಕಲಾ ಗೋಪಾಲ್ ಪುಂಜಾಲಕಟ್ಟೆ, ಪ್ರಮೀಳಾ ಉಮೇಶ್ ಹಾರಬೆ, ಸಂಗೀತ ಶೆಟ್ಟಿ ಮಡಂತ್ಯಾರು, ಯಶೋಧ ಪೂಂಜಾ, ಆಶಾಲತಾ ಇವರನ್ನು ಆಯ್ಕೆ ಮಾಡಲಾಯಿತು.


ಈ ಸಂದರ್ಭದಲ್ಲಿ ಹೊಸ ಸದಸ್ಯರ ಸೇರ್ಪಡೆ ಸದಸ್ಯರ ಐಡಿ ಕಾರ್ಡ್ ನವೀಕರಣ ಹಾಗೂ ಐಡಿ ಕಾರ್ಡ್ ವಿತರಣೆ ಮಾಡಲಾಯಿತು. ಪ್ರಮೀಳಾ ಉಮೇಶ್ ಕಾರ್ಯಕ್ರಮ ನಿರೂಪಿಸಿ, ಸಂಗೀತ ಶೆಟ್ಟಿ ಸ್ವಾಗತಿಸಿದರು. ಸುಮಲತಾ ಧನ್ಯವಾದ ನೀಡಿದರು. ಕಾರ್ಯಕ್ರಮದ ನಂತರ ಸದಸ್ಯರಿಗೆ ಆಟೋಟ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು.

Related posts

ಮಾ.31ರೊಳಗೆ ಶಾಲಾ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವಂತೆ ಶಿಕ್ಷಣ ಇಲಾಖೆ ಸೂಚನೆ

Suddi Udaya

ಪಡಂಗಡಿಯಲ್ಲಿ ಶ್ರೀ ಕಟಿಲೇಶ್ವರಿ ಟ್ರೇಡರ್ಸ್ ಶುಭಾರಂಭ

Suddi Udaya

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya

ಲಾಯಿಲ: ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya
error: Content is protected !!