September 6, 2026
ತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವ ಮನೆಗಳಲ್ಲಿರುವವರಿಗೆ ಗ್ರಾಮ ಪಂಚಾಯತಿನಿಂದ ನೋಟೀಸು

ಬೆಳ್ತಂಗಡಿ: ಮಳೆಗಾಲದ ಅವಧಿಯಲ್ಲಿ ಉಂಟಾಗಬಹುದಾದ ವಿಪತ್ತುಗಳ ನಿರ್ವಹಣೆಗಾಗಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರು ಸಭೆ ನಡೆಸಿ ನೀಡಿರುವ ಆದೇಶದಂತೆ ಗುಡ್ಡ ಜರಿತ ಉಂಟಾಗಬಹುದಾದ ಸ್ಥಳದಲ್ಲಿ ಅಥವಾ ಹೊಳೆ/ತೊರೆ ಬದಿಯಲ್ಲಿರುವ ಮನೆಗಳವರಿಗೆ ವಿಪತ್ತು ನಿರ್ವಹಣಾ ಕಾಯ್ದೆ 2005ರಂತೆ ಗ್ರಾಮ ಪಂಚಾಯತಿಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳು ನೋಟೀಸನ್ನು ನೀಡುತ್ತಿದ್ದಾರೆ.
ಅಳದಂಗಡಿ, ಬಾರ್ಯ ಬೆಳಾಲು ಧರ್ಮಸ್ಥಳ ಕಳಿಯ ಕಾಶಿಪಟ್ಣ ಕೊಕ್ಕಡ ಕೊಯ್ಯುರು ಮಚ್ಚಿನ ಮಾಲಾಡಿ ಮಲವಂತಿಗೆ ಮರೋಡಿ ಮುಂಡಾಜೆ ನಾರಾವಿ ಪಡಂಗಡಿ ತೆಕ್ಕಾರು ಮಿತ್ತಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈವರೆಗೆ ಸುಮಾರು 190 ಕುಟುಂಬಗಳಿಗೆ ನೋಟೀಸನ್ನು ನೀಡಿ ಅಧಿಕ ಮಳೆಯಾದ ಸಂದರ್ಭದಲ್ಲಿ ತೆರೆಯಲಾಗುವ ಕಾಳಜಿ ಕೇಂದ್ರಗಳಿಗೆ ಅಥವಾ ಸಂಬಂಧಿಕರ ಮನೆಗಳಿಗೆ ತೆರಳುವಂತೆ ಸೂಚಿಸಲಾಗಿದೆ. ನೋಟಿಸು ನೀಡುವ ಕಾರ್ಯ ಮುಂದುವರಿದಿದೆ.
ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 6 ಮನೆಗಳಿಗೆ ನೋಟೀಸು ನೀಡಲಾಗಿದೆ.

Related posts

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ: ಸಾಮೂಹಿಕ ಗೌರಿ ಪೂಜೆ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

Suddi Udaya

ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ದಿ.ವಸಂತ ಬಂಗೇರರ ಪರವಾಗಿ ಪತ್ನಿ ಸುಜೀತಾ ವಿ. ಬಂಗೇರರಿಗೆ ಅಭಿನಂದನೆ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!