September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಜಿಲ್ಲಾಧಿಕಾರಿಗಳ ಆದೇಶ: ತುರ್ತು ಪಾಲನೆ ನೋಟೀಸು ಜಾರಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಆದೇಶದಂತೆ ನಿನ್ನೆ ಮತ್ತು ಇಂದು ತಾಲೂಕಿನ 42 ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳು ಮಳೆಗಾಲದ ಅವಧಿಯಲ್ಲಿ ಉಂಟಾಗಬಹುದಾದ ಗುಡ್ಡ ಜರಿತ ಸ್ಥಳಗಳಲ್ಲಿ ಮತ್ತು ಹೊಳೆ/ತೊರೆ ಬದಿಯಲ್ಲಿರುವ 432 ಮನೆಗಳವರಿಗೆ ವಿಪತ್ತು ನಿರ್ವಹಣಾ ಕಾಯ್ದೆ 2005ರಂತೆ ನೋಟೀಸನ್ನು ಖುದ್ದಾಗಿ ಜಾರಿಗೊಳಿಸಿದರು.

ಅಧಿಕ ಮಳೆಯಾದ ಸಂದರ್ಭದಲ್ಲಿ ತೆರೆಯಲಾಗುವ ಕಾಳಜಿ ಕೇಂದ್ರಗಳಿಗೆ ಅಥವಾ ಸಂಬಂಧಿಕರ ಮನೆಗಳಿಗೆ ತೆರಳುವಂತೆ ನೋಟಿಸಿನಲ್ಲಿ ಸೂಚಿಸಲಾಗಿದೆ. ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 6 ಮನೆಗಳಿಗೆ ನೋಟೀಸು ನೀಡಲಾಗಿದ್ದು ತಾಲೂಕಿನಲ್ಲಿ ಒಟ್ಟು 438 ಮನೆಗಳಿಗೆ ನೋಟೀಸು ನೀಡಲಾಗಿದೆ.


ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಇನ್ಸಿಡೆಂಟ್ ಕಮಾಂಡರ್ ಆಗಿ ನೇಮಕ ಮಾಡಲಾಗಿದ್ದು ಮಳೆಗಾಲದ ಅವಧಿಯಲ್ಲಿ ದಿನದ ಇಪ್ಪತ್ತನಾಲ್ಕು ಗಂಟೆಯೂ ಆಯಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಳೆ ಗಾಳಿಯಿಂದ ಉಂಟಾಗಬಹುದಾದ ವಿಪತ್ತುಗಳ ಬಗ್ಗೆ ತೀವ್ರ ನಿಗಾ ವಹಿಸಿ ಆಕಸ್ಮಿಕ ಅವಗಢಗಳು ಉಂಟಾದಾಗ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯತೆಯೊಂದಿಗೆ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.

Related posts

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಕಲ್ಮಂಜ: ಅಕ್ಷಯ ನಗರದಲ್ಲಿ ಕಾಡಾನೆ ಓಡಾಟ

Suddi Udaya

ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಸೋಣಂದೂರು: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಚಂದ್ರಕುಮಾರ್ ರವರಿಗೆ ಸೇವಾ ನಿವೃತ್ತಿ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

Suddi Udaya
error: Content is protected !!