July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ,ಪ್ರತಿಭಾ ಪುರಸ್ಕಾರ,ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಬಳಂಜ: ವಿದ್ಯೆಯೆಂಬ ಶಕ್ತಿ ನಮ್ಮೊಳಗಿದ್ದಾಗ ಆತ್ಮವಿಶ್ವಾಸ ಹೆಚ್ಚಾಗಿ ಸರಿಯಾದ ಗುರಿ ತಲುಪಲು ಸಾಧ್ಯವಿದೆ.ಜನರಲ್ಲಿ ಜಾಗೃತಿ ಮೂಡಿ,ಸ್ವಾವಲಂಬನೆಗೆ ಹೆಚ್ಚಿನ ಒತ್ತು ನೀಡಿದಾಗ ಸಮಾಜದ ಬದಲಾವಣೆ ಸಾಧ್ಯ ಎಂದು ನಿವೃತ್ತ ಮುಖ್ಯೋಪಾಧ್ಯಾಯಿನಿ ಪುಷ್ಪಲತಾ ಅವರು ಹೇಳಿದರು.

ಅವರು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಯುವ ಬಿಲ್ಲವ ಮತ್ತು ಮಹಿಳಾ ಬಿಲ್ಲವ ವೇದಿಕೆ ನೇತೃತ್ವದಲ್ಲಿ, ಸಂಘದ ಧತ್ತಿನಿಧಿ ಯೋಜನೆಯಡಿ ನೀಡಲ್ಪಡುವ ಉಚಿತ ಪುಸ್ತಕ ವಿತರಣಾ ಸಮಾರಂಭವನ್ನು ಜೂ.8 ರಂದು ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣದ ಮೂಲಕ ಕೇರಳದಲ್ಲಿ ಕ್ರಾಂತಿ ಮಾಡಿ ಸಾಕ್ಷರತೆಯ ನಾಡನ್ನಾಗಿ ಪರಿವರ್ತಿಸಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು. ಅವರ ಅದ್ಬುತ ಚಿಂತನೆ, ದೂರದೃಷ್ಟಿ ಸಾರ್ವಕಾಲಿಕವಾದುದು. ಅವರ ತತ್ವ ಸಿದ್ದಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಬದುಕು ಉನ್ನತಿ ಪಡೆಯುತ್ತದೆ ಎಂದರು.

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಅಧ್ಯಕ್ಷತೆ ವಹಿಸಿ ಮಾತನಾಡಿ ಶಿಕ್ಷಣದಿಂದ ಮಾತ್ರ ಸಮಾಜದ ಪರಿವರ್ತನೆ ಸಾಧ್ಯವಾಗಿದ್ದು ಕಳೆದೆರೆಡು ದಶಕಗಳಿಂದ ಸಂಘವು ಧತ್ತಿನಿಧಿ ಯೋಜನೆಯಿಂದ ಕಲಿಕೆಗೆ ಹೆಚ್ವಿನ ಪ್ರೋತ್ಸಾಹ ನೀಡುತ್ತಿದೆ ಎಂದರು.

ಶಿಕ್ಷಣಕ್ಕೆ ಶಕ್ತಿಯಾದ ಧತ್ತಿನಿಧಿ ಯೋಜನೆ
ಸುದೀರ್ಘ 46 ವರ್ಷಗಳ ಭವ್ಯ ಪರಂಪರೆಯಿರುವ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯು ಸಮಾಜಕ್ಕೆ ನೀಡಿದ ವಿಶೇಷ ಸೇವೆಗಾಗಿ ಈ ಬಾರಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯಿಂದ ಪುರಸ್ಕೃತಗೊಂಡಿದೆ. ಸುಮಾರು ಎರಡೂವರೆ ದಶಕಗಳ ಹಿಂದೆ ಹಿರಿಯರಾದ ಹೆಚ್.ಧರ್ಣಪ್ಪ ಪೂಜಾರಿ,ವಸಂತ ಸಾಲಿಯಾನ್,ನೋಣಯ್ಯ ಪೂಜಾರಿಯವರ ನೇತೃತ್ವದಲ್ಲಿ ಅಲ್ಲಿಂತ್ಯಾರು ಶ್ರೀಧರ ಪೂಜಾರಿಯವರು ಅವರ ತಾಯಿಯ ಹೆಸರಿನಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಹಿಂದೆ ಉಳಿಯಬಾರದು ಎಂಬ ಸದುದ್ದೇಶದಿಂದ ಸಂಘದ ಧತ್ತಿನಿಧಿ ಯೋಜನೆಗೆ ಮೊತ್ತ ನೀಡಿ ಆ ಮೂಲಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು. ಸಮಾಜದ ಬಂಧುಗಳು ಸ್ವರ್ಗಸ್ಥರಾದರೆ ಅವರ ನೆನಪಿಗಾಗಿ ಅವರ ಕುಟುಂಭಿಕರು ಶೈಕ್ಷಣಿಕ ಶಕ್ತಿ ನೀಡುವ ಮೂಲಕ ಅವರ ಹೆಸರು ಶಾಶ್ವತವಾಗಿ ನೆನಪಿನಲ್ಲಿ ಉಳಿಯುವಂತೆ ಕೈಜೋಡಿಸುತ್ತಿದ್ದಾರೆ.

ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಧತ್ತಿನಿಧಿ ಯೋಜನೆಯಿಂದ ನೀಡಲ್ಪಡುವ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಪಿಯುಸಿ ಹಾಗೂ ಎಸ್.ಎಸ್.ಎಲ್‌ಸಿ ಸಾಧನೆಗೈದ ವಿದ್ಯಾರ್ಥಿಗಳಾದ ಮೌಲ್ಯ ಕಾಪಿನಡ್ಕ,ಸುಜ್ಞಾ ಅಶ್ವಥಪಲಿಕೆ,ರಿತಿಕಾ ಪೂಜಾರಿ ಬಳಂಜ,ರಮ್ಯ ಬಳಂಜ ಇವರನ್ನು ಸನ್ಮಾನಿಸಲಾಯಿತು. ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಸ್ತಾಂತರಿಸಲಾಯಿತು.ನೂರಾರು ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಹಾಗೂ ನೀರಿನ ಬಾಟಲಿ ನೀಡಿ ಶೈಕ್ಷಣಿಕವಾಗಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲಾಯಿತು.

ವೇದಿಕೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಬೊಂಟ್ರೋಟ್ಟು,ಕೋಶಾಧಿಕಾರಿ ಪ್ರವೀಣ್ ಕುಮಾರ್ ಹೆಚ್.ಎಸ್,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್,ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಭಾರತಿ ಸಂತೋಷ್ ಕುಮಾರ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿ, ಪ್ರವೀಣ್ ಕುಮಾರ್ ಹೆಚ್‌ ಎಸ್ ಸ್ವಾಗತಿಸಿ, ಶಿಕ್ಷಕಿ ವಿಶಾಲ ಜಗದೀಶ್ ನಿರೂಪಿಸಿ,ವಂದಿದಿದರು. ಸಂಘದ ಮಾಜಿ ಅಧ್ಯಕ್ಷರು,ನಿರ್ದೇಶಕರು ಸದಸ್ಯರು ಸಹಕರಿಸಿದರು.

Related posts

ಜೂ.19: ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಗ್ರಾಮಸ್ಥರ ಸಭೆ

Suddi Udaya

ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ವರ್ಷಾವಧಿ ಜಾತ್ರೋತ್ಸವ

Suddi Udaya

ಆರಂಬೋಡಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: 500ಕ್ಕಿಂತ ಹೆಚ್ಚು ಜನರು ವಿವಿಧ ರೀತಿಯ ಆರೋಗ್ಯ ತಪಾಸಣೆ ಮಾಡಿದ್ದು ವಿಶೇಷವಾಗಿತ್ತು

Suddi Udaya

ಶಿಶಿಲದಲ್ಲಿ ನರೇಂದ್ರ ಮೋದಿಯವರ ಪರಿಕಲ್ಪನೆಯಂತೆ ಒಂಬತ್ತು ಜನ ಮಹಿಳೆಯರಿಂದ ಪ್ರಥಮ ಮತದಾನ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

Suddi Udaya

ಭಜನಾ ಕಮ್ಮಟ; ಭಜನೆಗಳು ಜೀವನ ಶಿಕ್ಷಣ ಕಲಿಸುತ್ತವೆ: ಬಿ.ಕೆ. ಧನಂಜಯ ರಾವ್

Suddi Udaya
error: Content is protected !!