27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಯೋಗಾಸನ ತರಬೇತಿ ಕಾರ್ಯಕ್ರಮದ ಉದ್ಘಾಟನ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ನ್ಯೂಟ್ರಿಷನ್ ಮತ್ತು ಡಯಟಿಕ್ಸ್ ವಿಭಾಗದ ಡೀನ್ ಡಾ. ಗೀತಾ.ಬಿ ಶೆಟ್ಟಿ ಹಾಗೂ ಕ್ಲಿನಿಕಲ್ ಯೋಗ (ಎಮ್.ಡಿ) ಪ್ರಥಮ ವರ್ಷದ ವಿದ್ಯಾರ್ಥಿನಿ ಡಾ. ಅಶ್ವಿನಿ.ಎ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ, ಯೋಗದ ಮಹತ್ವದ ಕುರಿತು ಮಾಹಿತಿ ಹಂಚಿಕೊಂಡರು.

ತರಬೇತುದಾರರಾಗಿ ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳಾದ ದಿವ್ಯ ಬಿ.ಯು ಹಾಗೂ ನಿರ್ವಾಣ ಶಾಲಾ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ತರಬೇತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಸುಲ್ಕೇರಿ: ಇರಂತೊಟ್ಟು ಹೊಸಮನೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಅಳದಂಗಡಿ ವಲಯ ವಾರ್ಷಿಕ ಮಹಾಸಭೆ

Suddi Udaya

ನಾವೂರು ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಹರೀಶ್ ಪೂಂಜ ಬೃಹತ್ ಬಹುಮತದಿಂದ ಗೆಲುವು: ಬಳಂಜ, ನಾಲ್ಕೂರು, ತೆಂಕಕಾರಂದೂರಿನಲ್ಲಿ ವಿಜಯೋತ್ಸವ

Suddi Udaya

ಬೆಳ್ತಂಗಡಿ ಗಣೇಶೋತ್ಸವ ಜಲಸ್ಥಂಭನ ಶೋಭಾಯಾತ್ರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಎಂ ಎಲ್ ಸಿ ಕಿಶೋರ್ ಕುಮಾರ್ ಬೊಟ್ಯಾಡಿ ಭಾಗಿ

Suddi Udaya
error: Content is protected !!