September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ.17: ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ NABH ರಾಷ್ಟ್ರೀಯ ಮಾನ್ಯತೆ ಘೋಷಣೆ, ನವೀಕೃತ ಸುಧಾರಿತ ಪ್ರಯೋಗಾಲಯ ವಿಭಾಗ, ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಔಟ್ರೀಚ್ ಸೆಂಟರ್ ಉದ್ಘಾಟನೆ

ಕಕ್ಕಿಂಜೆ: ಇಲ್ಲಿಯ ವೈದ್ಯಕೀಯ ಕ್ಷೇತ್ರದಲ್ಲಿ ಹೆಸರುವಾಸಿಯಾದ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ NABH ರಾಷ್ಟ್ರೀಯ ಮಾನ್ಯತೆ ಗೋಷಣೆ, ನವೀಕೃತ ಸುಧಾರಿತ ಪ್ರಯೋಗಾಲಯ ವಿಭಾಗ, ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಔಟ್ರೀಚ್ ಸೆಂಟರ್ ಉದ್ಘಾಟನಾ ಸಮಾರಂಭವು ಜೂ.17 ರಂದು ನಡೆಯಲಿದೆ ಎಂದು ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ| ಮುರಳಿಕೃಷ್ಣ ಇರ್ವತ್ರಾಯ ತಿಳಿಸಿರುತ್ತಾರೆ.

ಮಂಗಳೂರು ಕೆಎಂಸಿ ಜನರಲ್ ಮೆಡಿಸಿನ್ ವಿಭಾಗದ ಪ್ರೊಫೆಸರ್, ವೈದ್ಯಕೀಯ ಅಧೀಕ್ಷಕರು ಡಾ| ಚಕ್ರಪಾಣಿ ಎಂ. ಉದ್ಘಾಟನೆಯನ್ನು ನೆರವೇರಿಸಲಿರುವರು. ಮುಖ್ಯ ಅತಿಥಿಗಳಾದ ಬೆಳ್ತಂಗಡಿ ತಾಲೂಕು ಐಎಂಎ ಅಧ್ಯಕ್ಷರು, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಡಾ| ಸ್ವರ್ಣಲತಾ ರವರು ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಸೆಂಟರ್ ನ್ನು ಉದ್ಘಾಟಿಸಲಿರುವರು. ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ನ ಮುಖ್ಯ ಇನ್ಫರ್ಟಿಲಿಟಿ ಕನ್ಸಲ್ವೆಂಟ್ ಡಾ| ಗೌರವ್ ಗುಜರಾತಿ ರವರು ನವೀಕೃತ ಸುಧಾರಿತ ಪ್ರಯೋಗಾಲಯ ಉದ್ಘಾಟಿಸಲಿರುವರು.

ಬೆಳ್ತಂಗಡಿ ತುಳು ಶಿವಳ್ಳಿ ಸಭಾದ ಅಧ್ಯಕ್ಷ ರಾಜಪ್ರಸಾದ ಪೊಳ್ನಾಯ, ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಡಾ. ವಂದನಾ ಎಂ. ಇರ್ವತ್ರಾಯ ಭಾಗವಹಿಸಲಿರುವರು. ಆಸ್ಪತ್ರೆಯು ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ,ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್, ಹೊಯ್ಸಳ ಹೆಲ್ತ್ಕೇರ್ ಮೂಡಿಗೆರೆಯಲ್ಲಿ ಜನರಿಗೆ ಆರೋಗ್ಯ ಸೇವೆ ನೀಡುತ್ತಿದೆ.

Related posts

ಜೂ.21: ಕಳಿಯ ಪ್ರಾ.ಕೃ.ಪ.ಸ. ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ, ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ ಹಾಗೂ ಎರಡನೇ ಬಾರಿಗೆ ನೂತನ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜ ಮತ್ತು ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್ ಪುರಸ್ಕೃತ ಡಾ. ಎಂ.ಎಸ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ:ಎಸ್.ಡಿ.ಎಂ ಮಹಿಳಾ ಐ.ಟಿ.ಐ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ

Suddi Udaya

ಲಾಯಿಲ: ಟಿಬಿ ಕ್ರಾಸ್ ನಲ್ಲಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಾಹನಗಳಿಗೆ ಎಲ್‌ಇಡಿ ಬಲ್ಬ್ ನಿಷೇಧ: ನಿಯಮ ಉಲ್ಲಂಘಿಸಿದರೆ ಜುಲೈ 1ರಿಂದಲೇ ದಂಡ

Suddi Udaya

ತಣ್ಣೀರುಪಂತ ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!