September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ತರಬೇತಿ ಶಿಬಿರದ ಉದ್ಘಾಟನೆ

ಬೆಳ್ತಂಗಡಿ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಶಾಲಾ ಕ್ರೀಡಾ ಸಂಘದ ವತಿಯಿಂದ 10 ದಿನದ ಉಚಿತ ಯೋಗ ತರಬೇತಿ ಶಿಬಿರವನ್ನು ಅಂತರಾಷ್ಟ್ರೀಯ ಯೋಗ ತರಬೇತುದಾರರು, ಯೋಗ ಗುರುಗಳಾದ ಕೆ ಅಶೋಕ್ ಕುಮಾರ್ ಉದ್ಘಾಟಿಸಿದರು.


ಯೋಗ ಶಿಬಿರದ ಉದ್ಘಾಟಕರಾಗಿ ಆಗಮಿಸಿ ನಮ್ಮ ದಿನನಿತ್ಯದ ಜೀವನದಲ್ಲಿ ಯೋಗದ ಮಹತ್ವದ ಆರೋಗ್ಯಯುತ ಜೀವನಕ್ಕೆ ಯೋಗ ಮತ್ತು ಪ್ರಾಣಾಯಾಮ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ವಿಸ್ತಾರವಾಗಿ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹೇಮಲತಾ ಎಂ ಆರ್ ರವರು ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಯೋಗ ತರಬೇತುಗಾರರಾಗಿ ಎಸ್.ಡಿ.ಎಮ್ ಬಿ.ಎನ್.ವೈ.ಎಸ್ ಕಾಲೇಜಿನ ವಿದ್ಯಾರ್ಥಿನಿಯರಾದ ಸುಕೇತ, ಪ್ರಾಪ್ತಿ ಮತ್ತು ಕೀರ್ತನಾ ಭಾಗವಹಿಸಿದ್ದರು. ಶಾಲಾ ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ಉಪಸ್ಥಿತರಿದ್ದರು.


ಶಿಕ್ಷಕಿ ಶ್ರೀಮತಿ ಗೀತಾ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಚೇತನಾ ವಂದಿಸಿ, ಶ್ರೀಮತಿ ನೀತಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Suddi Udaya

ಬಳಂಜ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾ ಕೂಟ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಮೋಹನ್ ಕುಮಾರ್

Suddi Udaya

ಬಂದಾರು: ಬಟ್ಟೆಯಂಗಡಿ ನಡೆಸುತ್ತಿದ್ದ ನಿರ್ಮಲ ಹೃದಯಾಘಾತದಿಂದ ನಿಧನ

Suddi Udaya

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 548ನೇಯ ಯೋಜನೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ:ಶಾಲಾ ಮಕ್ಕಳಿಗೆ ಊಟದ ಬಟ್ಟಲು, ಲೋಟ ಮತ್ತು ತಟ್ಟೆ ಹಸ್ತಾಂತರ ಕಾರ್ಯಕ್ರಮ ನಡೆಯಿತು

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಇವರ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಕೊಕ್ಕಡ ಬಾರ್ ನಲ್ಲಿ ಇಬ್ಬರ ಮೇಲೆ ಹಲ್ಲೆ: ಪ್ರಕರಣ ದಾಖಲು

Suddi Udaya
error: Content is protected !!