25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸ.ಪ್ರಥಮ ದರ್ಜೆ ಕಾಲೇಜಿನಲ್ಲಿ ಮ್ಯೂಚುವಲ್ ಫಂಡ್ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ಸ್ನಾತ್ತಕೋತ್ತರ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಮ್ಯೂಚುವಲ್ ಫಂಡ್ ಹಾಗೂ ಇತರೆ ಶೇರು ಮಾರುಕಟ್ಟೆಯ ಹೂಡಿಕೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಹೂಡಿಕೆ ತಜ್ಞ ಅರ್ವಿನ್ ಡಿಸೋಜ ಇವರು ವಿದ್ಯಾರ್ಥಿಗಳಿಗೆ ಹೂಡಿಕೆ ಮಾಡುವಾಗ ಯೋಚನೆ ಮಾಡಿ ವಿಮರ್ಶೆ ಮಾಡಿ ತುಲನಾತ್ಮಕ ಅಧ್ಯಯನದೊಂದಿಗೆ ಹೂಡಿಕೆ ಮಾಡಬೇಕಾಗುತ್ತದೆ. ಷೇರು ಮಾರುಕಟ್ಟೆಯಲ್ಲಿ ಪ್ರತಿದಿನ ಕ್ಷಣ ಕ್ಷಣಕ್ಕೂ ಏರಿಳಿತಗಳಾಗುತ್ತಿರುತ್ತವೆ, ಅದನ್ನು ಗಮನಿಸಿ ನಾವು ಹೂಡಿಕೆ ಮಾಡಬೇಕು ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಸುರೇಶ್ ವಿ., ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಪದ್ಮನಾಭ ಕೆ ಹಾಗೂ ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ| ರವಿ ಎಮ್ ಏನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ್ವಿತೀಯ ಎಂಕಾಂ ನ ಕುಮಾರಿ ಅನನ್ಯ ಜೈನ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.

Related posts

ಉಜಿರೆ: ಶ್ರೀ ಧ.ಮಂ.ಪಾಲಿಟೆಕ್ನಿಕ್’ನಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಹದಗೆಟ್ಟ ರಸ್ತೆ: ಮಡಂತ್ಯಾರು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ರಸ್ತೆ ದುರಸ್ತಿ

Suddi Udaya

ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸ.ಸಂಘದ 21ನೇ ವಾರ್ಷಿಕ ಮಹಾಸಭೆ: ಎಸ್ಸೆಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಪುದುವೆಟ್ಟು ಓಂಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ಸೀತಾಪಹಾರ – ಜಟಾಯು ಮೋಕ್ಷ ತಾಳಮದ್ದಳೆ

Suddi Udaya
error: Content is protected !!