25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಲೋಕೋಪಯೋಗಿ ಇಲಾಖೆಯಲ್ಲಿ 38 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿವಪ್ರಸಾದ್ ಅಜಿಲ ದಂಪತಿಗೆ ಊರವರಿಂದ ಪೌರ ಸನ್ಮಾನ, ಷಷ್ಠ್ಯಬ್ಧ ಸಂಭ್ರಮ, ಸಾವಿರಾರು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಅಳದಂಗಡಿ: ಲೋಕೋಪಯೋಗಿ ಇಲಾಖೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿ, ಕಳೆದ 3 ವರ್ಷಗಳಿಂದ ರಾಷ್ಟ್ರೀಯ ಹೆದ್ದಾರಿ ಇಲಾಖೆಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್‌ರಾಗಿ ಪದೋನ್ನತಿ ಹೊಂದಿ ಸೇವಾ ನಿವೃತ್ತಿ ಪಡೆದು,ಬದುಕಿನ 60 ಸಂವತ್ಸರಗಳನ್ನು ಯಶಸ್ವಿಯಾಗಿ ಪೂರೈಸಿರುವ ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನದ ಆಡಳಿತದಾರರು, ಕೊಡುಗೈ ದಾನಿ, ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಿಗೆ ಕೊಡುಗೆಗಳನ್ನು ನೀಡಿರುವ ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲ ದಂಪತಿಗೆ ಊರವರಿಂದ ಪೌರ ಸನ್ಮಾನ ಮತ್ತು ಷಷ್ಠ್ಯಬ್ಧ ಸಂಭ್ರಮ ಹಾಗೂ ಶ್ರೀ ಸತ್ಯದೇವತೆ ದೈವಸ್ಥಾನದ ವತಿಯಿಂದ 22ನೇ ವರ್ಷದ ಪುಸ್ತಕ ವಿತರಣೆ (7000 ವಿದ್ಯಾರ್ಥಿಗಳಿಗೆ) ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜೂ.14ರಂದು ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮೂಡುಬಿದಿರೆ ಶ್ರೀ ಜೈನ ಮಠದ ಪರಮಪೂಜ್ಯ ಭಾರತಭೂಷಣ ಡಾ| ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮಿಗಳು ಹಾಗೂ ಕಾಸರಗೋಡು ಶ್ರೀ ಎಡನೀರು ಮಠದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು ಅಧ್ಯಕ್ಷತೆಯನ್ನು ವಹಿಸಿದ್ದರು.

ಮಂಗಳೂರು ಲೋಕಸಭಾ ಸದಸ್ಯ ಕ್ಯಾ| ಬ್ರಿಜೇಶ್ ಚೌಟ ಕಾರ್ಯಕ್ರಮ ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಂಗಳೂರು ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್, ವಿಧಾನ ಪರಿಷತ್ ಸದಸ್ಯರುಗಳಾದ ಕೆ. ಪ್ರತಾಪಸಿಂಹ ನಾಯಕ್,ಮಂಜುನಾಥ ಭಂಡಾರಿ,ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಹರೀಶ್ ಕುಮಾರ್, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಉಪಸ್ಥಿತರಿದ್ದರು.

ಎಸ್.ಎಸ್.ಎಲ್.ಸಿ 625 ಅಂಕ ಗಳಿಸಿ ರಾಜ್ಯಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿ ಸಾನಿಧ್ಯ ರಾವ್ ಅವರನ್ನು ಸನ್ಮಾನಿಸಲಾಯಿತು.

ನಾಗರಿಕ ಸನ್ಮಾನ ಸಮಿತಿ ಅಧ್ಯಕ್ಷ ಎಂ.ಗಂಗಾಧರ ಮಿತ್ತಮಾರು ಸ್ವಾಗತಿಸಿದರು.ಸಂಚಾಲಕ ದೇವೇಂದ್ರ ಹೆಗ್ಡೆ ಕೊಕ್ರಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ನೊಚ್ಚ ಸಹಕರಿಸಿದರು.

Related posts

ಉಜಿರೆಯಲ್ಲಿ 550 ಕೆಜಿ ತೂಕದ ಮಡಲ್ ಮೀನು: ಖರೀದಿಸಲು ಮುಗಿಬಿದ್ದ ಗ್ರಾಹಕರು

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಹಾಗೂ ಸೆಲ್ಕೋ ಫೌಂಡೇಶನ್ ಬೆಂಗಳೂರು ಆಶ್ರಯದಲ್ಲಿ ಸಮೃದ್ಧಿ ಸಂತೃಪ್ತಿ ಸಬಲೀಕರಣ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ತೆಂಕಕಾರಂದೂರು: ಹಿಂದೂ ಸಂಗಮ ಬಳಂಜ ಮಂಡಲ ಆಮಂತ್ರಣ ಪತ್ರಿಕೆ ಬಿಡುಗಡೆ: ಜ 25 ಬಳಂಜ ಮಂಡಲದಿಂದ ಬೃಹತ್ ಹಿಂದೂ‌‌ ಸಂಗಮ ಶೋಭಾಯಾತ್ರೆ

Suddi Udaya

ಬೆಳ್ತಂಗಡಿ: ಬೀದಿ ನಾಯಿಗೆ ಅಪಘಾತ: ಮಾನವೀಯತೆ ಮೆರೆದ ಡಾ. ರವಿಕುಮಾರ್

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಪ್ರಾರ್ಥನಾರಿಗೆ ಸನ್ಮಾನ

Suddi Udaya
error: Content is protected !!