ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಪೆರಿಯಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಜಿರೆ ಪ್ರಭಾತ್ ಸಂಸ್ಥೆ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣೆ

ಬೆಳಾಲು: ಪೆರಿಯಡ್ಕ ಸ ಕಿ ಪ್ರಾ ಶಾಲೆಯಲ್ಲಿ ಪ್ರಭಾತ್ ಸಂಸ್ಥೆ ಉಜಿರೆ ಇವರು ನಿರಂತರ 14 ವರ್ಷಗಳಿಂದ ಎಲ್ಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ಒದಗಿಸುತ್ತಾ ಬಂದಿದ್ದು ಇದರ ವಿತರಣಾ ಸಮಾರಂಭವು ಜೂ.13ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ಪುಷ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಭಾತ್ ಸಂಸ್ಥೆಯ ಮಾಲಕರಾದ ಶ್ರೀಮತಿ ಪ್ರಿಯಾಂಕ ಪ್ರವೀಣ್ ಭಟ್ ಹಾಗೂ ಅವರ ಹೆತ್ತವರು, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ ಗೌಡ, ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಎಳ್ಳುಗದ್ದೆ, ಹಳೆಪೇಟೆ ಉಜಿರೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಪ್ರತಿಮಾ ಕೆ ಎಂ, ಭಾಗವಹಿಸಿದರು.

ಈ ಸಂದರ್ಭದಲ್ಲಿ ಪ್ರಭಾತ್ ಸಂಸ್ಥೆಯ ಮಾಲಕರಾದ ಶ್ರೀಮತಿ ಪ್ರಿಯಾಂಕ ಪ್ರವೀಣ್ ಭಟ್ ಇವರನ್ನು ಶಾಲೆಯ ಪರವಾಗಿ ಗೌರವಿಸಲಾಯಿತು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ದಾನಿಗಳಿಗೆ ಶಾಲಾ ವಿದ್ಯಾರ್ಥಿಗಳಾದ ಕುಮಾರಿ ಚಾರ್ವಿ ಹಾಗೂ ಚರಿತ ಕೃತಜ್ಞತೆಗಳನ್ನು ಸಲ್ಲಿಸಿದರು.

ಸಹ ಶಿಕ್ಷಕಿ ಶ್ರೀಮತಿ ಜಯಶ್ರೀ ಬಿ ಕೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ನಿಕಟಪೂರ್ವ ಅಧ್ಯಕ್ಷ ಸಂತೋಷ ಮಡಿವಾಳ, ಎಸ್ ಡಿ ಎಂ ಸಿ ಸದಸ್ಯರಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ನಾಳೆ (ನ.8): ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ರಖ್ಯಾತ ಪ್ಲೈವುಡ್ ಮಳಿಗೆ “ಆನ್‌ಪ್ಲೈ” ಶುಭಾರಂಭ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Suddi Udaya

ಮೇ 9 ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

Suddi Udaya

ಕಕ್ಕಿಂಜೆ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya
error: Content is protected !!