September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಸಂರಕ್ಷಣಾ ಸಮಿತಿ ನೂತನ ಅಧ್ಯಕ್ಷರಾಗಿ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಆಯ್ಕೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ಸಭೆಯು ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರ ಅಧ್ಯಕ್ಷತೆಯಲ್ಲಿ ಜೂ. 13 ರಂದು ನಡೆಯಿತು.

ಈ ಹಿಂದೆ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾಗಿದ್ದ ಸುಬ್ರಹ್ಮಣ್ಯ ಶಬರಾಯ ಅವರು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ ಅವರ ಸ್ಥಾನಕ್ಕೆ ನೂತನ ಅಧ್ಯಕ್ಷರನ್ನಾಗಿ ಪ್ರಸ್ತುತ ಸಮಿತಿಯ ಉಪಾಧ್ಯಕ್ಷರಾಗಿರುವ ಮತ್ತು ಸೌತಡ್ಕ ದೇಗುಲದ ಅಭಿವೃದ್ದಿಗೆ ನಿರಂತರ ಶ್ರಮಿಸುತ್ತಿರುವ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಇವರನ್ನು ನೂತನ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಸುಬ್ರಹ್ಮಣ್ಯ ಶಬರಾಯ ಅವರನ್ನು ಸಮಿತಿಯ ಗೌರವ ಸಲಹೆಗಾರರನ್ನಾಗಿ ಆಯ್ಕೆ ಮಾಡಲಾಯಿತು. ದೇಗುಲದ ಬಳಕೆಗಾಗಿ ಕಳೆದ 20 ವರ್ಷಗಳ ಹಿಂದೆ ಖರೀದಿಸಲಾಗಿದ್ದ ಜಮೀನನ್ನು ಖಾಸಗಿ ಟ್ರಸ್ಟ್ ಸ್ವಾಧೀನ ಮಾಡಿಕೊಂಡಿದ್ದು, ಇದನ್ನು ಮರಳಿ ದೇಗುಲಕ್ಕೇ ಸಿಗುವಂತೆ ಮಾಡಬೇಕೆಂಬ ನಿಟ್ಟಿನಲ್ಲಿ ಪ್ರಶಾಂತ್ ರೈ ಅವರು ಮುಂಚೂಣಿಯಲ್ಲಿ ಶ್ರಮಿಸಿದವರು ಹಾಗೂ ಸೌತಡ್ಕ ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿಯೂ ಈ ಹಿಂದೆ ಸೇವ ಸಲ್ಲಿಸಿದವರಾಗಿದ್ದಾರೆ ಹಾಗಾಗಿ ಇವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಸಮಿತಿಯ ಸದಸ್ಯರು ಸಭೆಯಲ್ಲಿ ತಿಳಿಸಿದರು.

Related posts

ಗುರಿಪಳ್ಳ ಬಿಜೆಪಿಯ 30 ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Suddi Udaya

ಪಣಕಜೆ : ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು: ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು

Suddi Udaya

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಸಮಸ್ಯೆ

Suddi Udaya

ಪಣಕಜೆ:ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆ: ಆರೋಗ್ಯ ತಪಾಸಣೆ, ಪರಿಸರದಲ್ಲಿ ಸ್ವಚ್ಚತೆ ಕಾಪಾಡುವುದರ ಬಗ್ಗೆ ಮಾಹಿತಿ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಲಾಯಿಲ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳ ತೆರವು ಕಾರ್ಯಾಚರಣೆ

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya
error: Content is protected !!