September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಕ್ಷಯ ಕೆರಿಯರ್ ಅಕಾಡೆಮಿಯ “ಡಿಪ್ಲೊಮ ಇನ್ ಏವಿಯೇಷನ್” ಶಾರ್ಟ್ ಟಾರ್ಮ್ ಕೋರ್ಸ್ ನ ಹೊಸ ಬ್ಯಾಚ್ ಪ್ರಾರಂಭ


ಪುತ್ತೂರು: ಅಕ್ಷಯ ಕೆರಿಯರ್ ಅಕಾಡೆಮಿ ಮತ್ತು ಕೆರಿಯರ್ ಡೆಸ್ಟಿನಿ ಮಂಗಳೂರು ಸಹಯೋಗದಲ್ಲಿ ಪುತ್ತೂರಿನಲ್ಲಿ ಜೂನ್ 12 ರಂದು ದರ್ಬೆ ಆರಾದ್ಯ ಆರ್ಕೇಡ್‌ನಲ್ಲಿ ಒಂದು ವರ್ಷದ ಡಿಪ್ಲೊಮಾ ಇನ್ ಏವಿಯೇಷನ್ ಮತ್ತು ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್ ನ ಮೊದಲ ಬ್ಯಾಚ್ ಪ್ರಾರಂಭವಾಯಿತು. ಹೊಸ ವಿದ್ಯಾರ್ಥಿಗಳನ್ನು ಹೂಗಳನ್ನು ನೀಡಿ ಸ್ವಾಗತಿಸಲಾಯಿತು.


ಅಕ್ಷಯ ಕಾಲೇಜು ಚೇರ್‌ಮ್ಯಾನ್ ಜಯಂತ್ ನಡುಬೈಲು ಮಾತನಾಡಿ, ಭವಿಷ್ಯ ವನ್ನು ಉತ್ತಮ ರೂಪಿಸಲು ಏವಿಯೇನ್ ಕೋರ್ಸ್ ತುಂಬಾ ಒಳ್ಳೆಯದು ಮತ್ತು ವಾಯುಯಾನದಲ್ಲಿ ಉತ್ತಮ ವೃತ್ತಿಜೀವನವನ್ನು ನಿರ್ಮಿಸಲು ನಾವು ಉತ್ತಮ ಸೇವೆಯನ್ನು ಒದಗಿಸುತ್ತೇವೆ ಎಂದು ಅವರು ಶುಭ ಹಾರೈಸಿದರು.


ಡಿಪ್ಲೊಮಾ ಇನ್ ಏವಿಯೇಷನ್ ಮತ್ತು ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್ ಮೂಲಕ ವಿವಿಧ ಉದ್ಯೋಗಾವಕಾಶಗಳನ್ನು ನಾವು ಹೇಗೆ ಸುಲಭವಾಗಿ ಪಡೆಯಬಹುದು ಮತ್ತು ನಮ್ಮ ತಂಡವು ಹೇಗೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹ ನೀಡಿ ಉತ್ತಮ ಉದ್ಯೋಗ ಪಡೆಯಲು ಪ್ರೇರೇಪಿಸುದು ಮತ್ತು ಸೃಜನಾತ್ಮಕವಾಗಿ ವಿದ್ಯಾರ್ಥಿಗಳನ್ನುಸಿದ್ಧ ಮಾಡುವುದುನಮ್ಮ ಜವಾಬ್ದಾರಿಯಾಗಿದೆ ಎಂದು ಕೆರಿಯರ್ ಡೆಸ್ಟಿನಿ ಮಂಗಳೂರು ಇದರ ವ್ಯವಸ್ಥಾಪಕ ನಿರ್ದೇಶಕಿ ಜಯಶ್ರೀ ಹೇಳಿದರು.


ಜುಂಬಾ ಪ್ರಮಾಣೀಕೃತ ಫಿಟ್‌ನೆಸ್ ತರಬೇತುದಾರರಾದ ದೇವಿಪ್ರಸಾದ್ ಮಾತನಾಡಿ, ವಾಯುಯಾನದಲ್ಲಿ ಫಿಟ್‌ನೆಸ್‌ನ ಪ್ರಮುಖ ಅಂಶಗಳ ಬಗ್ಗೆ ವಿವರಿಸಿದರು.


ಇನ್ನೊಬ್ಬ ತರಬೇತುದಾರ ಶ್ರೀ ಶುಭಂ ಕುಲಾಲ್ ಅವರು ವಾಯುಯಾನ ಕ್ಷೇತ್ರದಲ್ಲಿ ಅಗತ್ಯವಿರುವ ಜ್ಞಾನ ಮತ್ತು ಕೌಶಲ್ಯಗಳ ಬಗ್ಗೆ ವಿವರಿಸಿದರು.


ಸಮಾರಂಭದಲ್ಲಿ ಅಕ್ಷಯ ಕಾಲೇಜಿನ ನಿರ್ದೇಶಕರು ಡಾ ಅಕ್ಷಯ್, ಆಡಳಿತಾಧಿಕಾರಿ ಅರ್ಪಿತ್ ಟಿಎ , ಭರತ್ ಒಲ್ತಾಜೆ ಮಾನವ ಸಂಪನ್ಮೂಲ ವ್ಯವಸ್ಥಾಪಕರು ಮತ್ತು ಯಾಮಿನಿ ಎಚ್‌ಆರ್ ಕೋ ಆರ್ಡಿನೇಟರ್ ಉಪಸ್ಥಿತರಿದ್ದರು.

Related posts

ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ

Suddi Udaya

ಅಂಡಿಂಜೆ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ: ಸಿರಿ ಧಾನ್ಯಗಳ ಬಳಕೆ ಹಾಗೂ ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ಕಾರ್ಯಾಚರಣೆ: ನೌಷದ್ ತಂಗಿ, ತಾಯಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ನೇತೃತ್ವದ ತಂಡ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರು ನಾರಾಯಣ ಸೇವಾ ಸಮಿತಿಯಿಂದ ಸುಲ್ಕೇರಿ ಅಂಗನವಾಡಿ ಹಾಗೂ ಶ್ರೀರಾಮ ಶಾಲೆಯಲ್ಲಿ ಶ್ರಮದಾನ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ಮಾಧುರ್ಯ ರವರಿಗೆ ಹವ್ಯಕ ಮಂಡಲದ ವತಿಯಿಂದ ಗೌರವ

Suddi Udaya

ಸೌಜನ್ಯರವರ ಅತ್ಯಾಚಾರ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya
error: Content is protected !!