March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ವರದಿಸಂಘ-ಸಂಸ್ಥೆಗಳು

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೂ.2 ಕೋಟಿ ಗೋಲ್ಮಾಲ್ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

ಬೆಳಾಲು: ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಇಬ್ಬರು ಸಿಬ್ಬಂದಿಗಳು ಸಂಘದ ಅಕೌಂಟಿನಿಂದ ಎರಡು ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಂಘದ ಅಧ್ಯಕ್ಷರ ದೂರಿನಂತೆ ಇಬ್ಬರ ಸಿಬ್ಬಂದಿಗಳ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತದಲ್ಲಿ 18-02-2022 ರಿಂದ 25-03-2025 ನೇ ಅವಧಿಯ ಸಂದರ್ಭದಲ್ಲಿ ಎರಡು ಕೋಟಿಯ ಹನ್ನೆರಡು ಲಕ್ಷದ ಎಂಟು ಸಾವಿರದ ಮುನ್ನೂರ ಇಪ್ಪತ್ತೆಂಟು ರೂಪಾಯಿ ಹದಿನೈದು ಪೈಸೆ (2,12,08,328,15) ಹಣವನ್ನು ಸಿಬ್ಬಂದಿಗಳಾದ ಬೆಳಾಲು ನಿವಾಸಿ ಎಲ್ಯಣ್ಣ ಪೂಜಾರಿ ಮಗ ಸದಾಶಿವ.ಓ @ ಸುಜಿತ್ ಮತ್ತು ಬೆಳಾಲು ನಿವಾಸಿ ವಾಸಪ್ಪ ಗೌಡರ ಮಗ ಪ್ರಶಾಂತ ಬಿ ಇಬ್ಬರು ಸೇರಿಕೊಂಡು ವಿವಿಧ ಮೂಲಗಳಿಂದ ವಂಚನೆ ಮಾಡಿದ್ದರು ಅದಲ್ಲದೆ ಪ್ರಶಾಂತ.ಬಿ ಎಂಬಾತ ಸಂಘದ ಠೇವಣಿಯ ರಶೀದಿಯನ್ನು ಕಳವು ಮಾಡಿಕೊಂಡು ಹೋಗಿದ್ದ.

ಈ ಸಂದರ್ಭದಲ್ಲಿ ಮೂರನೇ ಆರೋಪಿ ಬೆಳಾಲು ನಿವಾಸಿ ಎಲ್ಯಣ್ಣ ಪೂಜಾರಿ ಮಗ ಪ್ರಕಾಶ್ ಎಂಬಾತ 10 ಲಕ್ಷ ರೂಪಾಯಿ ಹಣ ಮೂರು ವರ್ಷದ ಅವಧಿಗೆ ಸಂಘದಲ್ಲಿ ಠೇವಣಿ ಇರಿಸಿ ಆ ದಿನದಂದು ಠೇವಣಿ ಆಧಾರದಲ್ಲಿ ಮೂರು ಲಕ್ಷದ ಐವತ್ತು ಸಾವಿರ (3,50,000) ರೂಪಾಯಿ ಹಣ ಸಾಲವಾಗಿ ಪಡೆದುಕೊಂಡಿದ್ದ.‌ 28-04-2025 ರಂದು ಒಂದು ಸುಳ್ಳು ಅರ್ಜಿ ಸಂಘಕ್ಕೆ ಸಲ್ಲಿಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಅವ್ಯವಹಾರ ಮಾಡಿದ್ದಾರೆ ಎಂದು ಆರೋಪಿಸಿ ಪೂರ್ತಿ ಠೇವಣಿ 10 ಲಕ್ಷ ರೂಪಾಯಿ ಬಡ್ಡಿ ಸಹಿತ ನನಗೆ ಮರುಪಾವತಿಸುವಂತೆ ಕೋರಿ ಅರ್ಜಿ ಸಲ್ಲಸಿದ್ದ. ನಿಜ ವಿಚಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ತಿಳಿಸಿ ಹೇಳಿದರೂ ಪ್ರಕಾಶ ಕೇಳದೆ ಅವ್ಯಾಚ ಶಬ್ದಗಳಿಂದ ನಿಂದಿಸಿ ಬೆದರಿಕೆಯೊಡ್ಡಿರುವುದಲ್ಲದೆ ನಂತರ ಪದೆ ಪದೆ ಸಂಘದ ಕಚೇರಿಗೆ ಬಂದು ಸಿಬ್ಬಂದಿಗಳಿಗೆ ಅವ್ಯಾಚ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕುತ್ತಿದ್ದ ಎಂದು ಸಂಘದ ಅಧ್ಯಕ್ಷರಾದ ಪದ್ಮ ಗೌಡ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮೇ.31 ರಂದು ಸದಾಶಿವ.ಓ@ಸುಜಿತ್ , ಪ್ರಶಾಂತ.ಬಿ, ಪ್ರಕಾಶ್ ವಿರುದ್ಧ ಕಲಂ -314,316(4),318(3),336(3),306,352,351(2),R/W 3(5) BNS 2023 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.*ಇಬ್ಬರು ಸಿಬ್ಬಂದಿ ಸಂಘದಿಂದ ಅಮಾನತು:* ಇಬ್ಬರು ಸಿಬ್ಬಂದಿ ಸದಾಶಿವ @ ಸುಜಿತ್ ಮತ್ತು ಪ್ರಶಾಂತ್ ನನ್ನು ಮೇ ತಿಂಗಳಲ್ಲಿ ಸಂಘದ ನಿರ್ದೇಶಕರು ಸೇರಿ ತನಿಖೆ ಮುಗಿಯುವವರೆಗೆ ಅಮಾನತು ಮಾಡಿದ್ದಾರೆ.

Related posts

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಉದ್ಘೋಷ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

Suddi Udaya

ನಾರಾವಿ ವೈಶಾಲಿ ಪರಿಸರದಲ್ಲಿ ಮನೆ ಹಾಗೂ ತೋಟಕ್ಕೆ ಸಿಡಿಲು ಬಡಿತ: ಸಿಡಿಲಿನ ರಭಸಕ್ಕೆ ಸುಟ್ಟು ಕರಕಲಾದ ಮನೆಯ ವಸ್ತುಗಳು, ಅಪಾಯದಿಂದ ಪಾರಾದ ತಾಯಿ- ಮಗಳು

Suddi Udaya

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

Suddi Udaya

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!