38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ವೇಶ್ಯಾವಟಿಕೆ ಶಂಕೆ ಮೇರೆಗೆ ಲಾಡ್ಜ್ ಗಳಿಗೆ ಪೊಲೀಸರಿಂದ ದಾಳಿ

ಬೆಳ್ತಂಗಡಿ : ವೇಶ್ಯಾವಟಿಕೆ ಚಟುವಟಿಕೆ ಶಂಕೆ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ನೇತೃತ್ವದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ಜೂ‌.14 ರಂದು ರಾತ್ರಿ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಉಜಿರೆಯ ಶ್ರೀ ದುರ್ಗಾ ಲಾಡ್ಜ್ ನಲ್ಲಿ ವೇಶ್ಯಾವಟಿಕೆ ನಡೆಸಲು ಯುವತಿಯನ್ನು ಕರೆತಂದಿದ್ದು ಬಯಲಾಗಿದೆ.

ಉಜಿರೆ ಬಸ್ ನಿಲ್ದಾಣದ ಬಳಿ ಇರುವ ಶ್ರೀ ದುರ್ಗಾ ಲಾಡ್ಜ್ ನಲ್ಲಿ ವೇಶ್ಯಾವಟಿಕೆಗೆ ಕರೆಸಿದ್ದ ಓರ್ವ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಲಾಗಿದ್ದು. ಲಾಡ್ಜ್ ನ ಮ್ಯಾನೇಜರ್ ಸಾವ್ಯ ಗ್ರಾಮದ ಬಾರೆಗುಡ್ಡೆ ಸತೀಶ್ ಪೂಜಾರಿ ಮತ್ತು ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಯೋಗಿಶ್ ಆಚಾರ್ಯ ಎಂಬವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಲಾಡ್ಜ್ ಮಾಲೀಕ ಉಜಿರೆಯ ರಮೇಶ್ ಶೆಟ್ಟಿ , ಮ್ಯಾನೇಜರ್ ಸತೀಶ್ ಪೂಜಾರಿ, ಸಿಬ್ಬಂದಿ ಯೋಗೀಶ್ ಆಚಾರ್ಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಬೆಳ್ತಂಗಡಿ ಪೊಲೀಸರು ಪ್ರತಿ ವಾರ ಲಾಡ್ಜ್ ಗಳಿಗೆ ತೆರಳಿ ಲಾಡ್ಜ್ ಲೆಡ್ಜರ್ ಪುಸ್ತಕಗಳನ್ನು ಪರಿಶೀಲನೆ ನಡೆಸುತ್ತಿದ್ದರು. ಹೊಸ ಎಸ್ಪಿ ಬಂದ ಬಳಿಕ ಇತ್ತೀಚೆಗೆ ಎಲ್ಲ ಲಾಡ್ಜ್ ಮಾಲೀಕರನ್ನು ಠಾಣೆಗೆ ಕರೆಸಿ ಸಿಸಿ ಕ್ಯಾಮರ ,ಲೆಡ್ಜರ್ ಪುಸ್ತಕ, ಲಾಡ್ಜ್ ಗೆ ಬರುವ ಗ್ರಾಹಕರ ಐಡಿ ಕಾರ್ಡ್ ಸರಿಯಾಗಿ ನೋಡಿಕೊಳ್ಳಲು ವಾರ್ನಿಂಗ್ ನೀಡಿದ್ದರು‌‌. ಆದ್ರೆ ಲಾಡ್ಜ್ ಮಾಲೀಕರು ಮಾತ್ರ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದರು ಎನ್ನಲಾಗಿದೆ.

ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ , ಸಬ್ ಇನ್ಸ್ಪೆಕ್ಟರ್ ಮುರುಳಿಧರ್ ನಾಯ್ಕ್, ಸಬ್ ಇನ್ಸ್ಪೆಕ್ಟರ್ ಯಲ್ಲಪ್ಪ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಗೆ ತೃತೀಯ ಸ್ಥಾನ

Suddi Udaya

ಹೆರಿಗೆ ನಂತರ ವಿಪರೀತ ರಕ್ತಸ್ರಾವ: ಲಾಯಿಲ ಗಾಂಧಿ ನಗರದ ಮಹಿಳೆ ಸಾವು

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರ : ಆಕಾಶಕಾಯಗಳ ವೀಕ್ಷಣೆ

Suddi Udaya

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya
error: Content is protected !!