25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಸ.ಪ್ರೌ. ಶಾಲೆಗೆ ಶೇ. 100 ಫಲಿತಾಂಶ: ಅಭಿನಂದನಾ ಕಾರ್ಯಕ್ರಮ

ನಿಡ್ಲೆ : ಇಲ್ಲಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನೂರು ಶೇಕಡ ಫಲಿತಾಂಶ ತಂದುಕೊಟ್ಟ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ಜೂ. 14 ರಂದು ನಡೆಯಿತು.

ದತ್ತಿನಿಧಿ ಮತ್ತು ಶಾಲಾ ವತಿಯಿಂದ ನಗದು ಪುರಸ್ಕಾರದೊಂದಿಗೆ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಎಸ್‌ಡಿಎಂಸಿ ಅಧ್ಯಕ್ಷ ಪುರುಷೋತ್ತಮ ಗೌಡ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯ ಶಿಕ್ಷಕ ರಾಜಗುರು ಹೆಬ್ಬಾರ್, ಗ್ರಾಮ ಪಂಚಾಯತ್ ಸದಸ್ಯ ಜಗದೀಶ್, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಕೃಷ್ಣಪ್ರಸಾದ್, ಎಸ್ ಡಿ ಎಮ್ ಸಿ ಸದಸ್ಯರು, ಪೋಷಕರು ಶಾಲಾ ಮುಖ್ಯ ಶಿಕ್ಷಕಿ ಶಾಂತಾ ಶೆಟ್ಟಿ , ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಶಿಕ್ಷಕರು ಮತ್ತು ಅತಿಥಿಗಳು ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಶಿಕ್ಷಕಿ ಸುಚಿತ್ರಾರವರು ಕಾರ್ಯಕ್ರಮ ನಿರೂಪಿಸಿದರು

Related posts

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ- ಉಜಿರೆ ನ್ಯೂಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಬೆಳ್ತಂಗಡಿಯ ‘ಆಲ್ಫಾ ಕೋಟ್’ ನಿವಾಸಿ ಮೇರಿ ಮಾಡ್ತಾ ನಿಧನ

Suddi Udaya

ಜ.28 ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ರಕ್ತೇಶ್ವರಿ ಮತ್ತು ಪಂಜುರ್ಲಿ ದೈವಗಳ ಪ್ರತಿಷ್ಠಾಪನೆ: ಫೆ.2 ರಂದು ದೈವಗಳ ನರ್ತನ ಸೇವೆ

Suddi Udaya

ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಪುದುವೆಟ್ಟು: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya
error: Content is protected !!