25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

“ಲೋಕಾಯುಕ್ತ ಜನ ಸಂಪರ್ಕ ಸಭೆ: ಗ್ರಾಮ ಮಟ್ಟದಲ್ಲಿ ಭ್ರಷ್ಟಚಾರದ ಕುರಿತು ಜಾಗೃತಿ-ಲೋಕಾಯುಕ್ತ ಅಧೀಕ್ಷಕ ಕುಮಾರಚಂದ್ರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ನಡೆದ “ಲೋಕಾಯುಕ್ತ ಜನ ಸಂಪರ್ಕ ಸಭೆ ಜೂ. 16ರಂದು ನಡೆಯಿತು.

ತಾಲೂಕು ಕಚೇರಿಯಲ್ಲಿ 10, ತಾಲೂಕು ಪಂಚಾಯತ್ 7, ಅರಣ್ಯ ಇಲಾಖೆ 2, ಸರ್ವೇ, ಸಮಾಜ ಕಲ್ಯಾಣ, ಪೊಲೀಸ್, ಕೋಪರೇಟಿವ್ ಸೊಸೈಟಿ ಹಾಗೂ ಶಿಕ್ಷಣ ಇಲಾಖೆಗಳ ಮೇಲೆ ತಲಾ ಒಂದು ದೂರುಗಳು ಬಂದಿದ್ದು ಒಟ್ಟು 28 ದೂರಗಳು ಸಲ್ಲಿಕೆಯಾಗಿದೆ. ಜಮೀನು ಖಾತೆ, ಪ್ಲಾಂಟಿಗ್ ಕುರಿತು ಹೆಚ್ಚಿನ ಅಹವಾಲುಗಳನ್ನು ಅಧಿಕಾರಿಗಳು ಸ್ವೀಕರಿಸಿದರು.

ಲೋಕಾಯುಕ್ತ ಪ್ರಭಾರ ಅಧೀಕ್ಷಕ ಕುಮಾರಚಂದ್ರ ಸುದ್ದಿಗಾರರೊಂದಿಗೆ ಮಾತನಾಡಿ ಸಭೆಯಲ್ಲಿ ಒಟ್ಟು 28 ದೂರುಗಳು ಸಲ್ಲಿಕೆಯಾಗಿದ್ದು ಈ ಪೈಕಿ ಎರಡು ದೂರುಗಳನ್ನು ಫಾರ್ಮ್ 1,2 ರಲ್ಲಿ ರಿಜಿಸ್ಟರ್ ಮಾಡಿ ಕೇಂದ್ರ ಕಚೇರಿಗೆ ಸಲ್ಲಿಸಲಾಗಿದೆ. ಇನ್ನೂ ಉಳಿದ ದೂರಗಳಿಗೆ ಕಾಲಮಿತಿಯಲ್ಲಿ ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗ್ರಾಮ ಮಟ್ಟದಲ್ಲಿ ಭ್ರಷ್ಟಚಾರ ಕುರಿತು ಜಾಗೃತಿ ಮೂಡಿಸಲು ಗ್ರಾಮ ಸಭೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಲು ಅವಕಾಶ ಕಲ್ಪಿಸಲು ಜಿ.ಪಂ.ಸಿಇಒ ಅವರಿಗೆ ಮನವಿ ಮಾಡಲಾಗಿದೆ. ಅಧಿಕಾರಿಗಳು ಸಾರ್ವಜನಿಕರ ಸೇವೆಗಾಗಿ ಇರುವುದು ಅವರನ್ನು ಪದೇ ಪದೇ ಸತಾಯಿಸುವ ಕಾರ್ಯ ಮಾಡಬಾರದು. ಇತ್ತೀಚೀನ ದಿನಗಳಲ್ಲಿ ಶಿಕ್ಷಣ ಇಲಾಖೆಯ ವಿರುದ್ಧ ಅನೇಕ ದೂರುಗಳು ಬುರುತ್ತಿದೆ. ಪಿಂಚಣಿ, ರಜೆ, ವೇತನ ಪಡೆಯಲು ಲಂಚ ನೀಡುವ ಸ್ಥಿತಿ ಇದ್ದು ಇದರ ವಿರುದ್ಧ ದೂರ ನೀಡಲು ಹಿಂದೇಟು ಹಾಕುತ್ತಿರುವುದು ವಿಪರ್ಯಾಸ. ಲೋಕಾಯುಕ್ತದ ನಿಯಮಗಳು ಹಾಗೂ ಭ್ರಷ್ಟಚಾರದ ಕುರಿತು ಮಾಹಿತಿ ನೀಡಿದರು.

ಡಿವೈಎಸ್ಪಿ ಸುರೇಶ್ ಕುಮಾರ್.ಪಿ, ತಾ.ಪಂ. ಇಒ ಭವಾನಿಶಂಕರ್ ಎನ್, ತಹಶೀಲ್ದಾರ್ ಪ್ರಥ್ವಿ ಸಾನಿಕಂ, ಇನ್ಸ್ಪೆಕ್ಟರ್ ಭಾರತಿ.ಪಿ ಮತ್ತು ಚಂದ್ರಶೇಖರ್ ಕೆ.ಎನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಲೋಕಾಯುಕ್ತ ಸಿಬ್ಬಂದಿಗಳಾದ ಮಹೇಶ್, ನಾಗಪ್ಪ, ಯತೀಶ್, ರಾಜಶೇಖರ್, ದುಂಡಪ್ಪ, ಗಂಗಣ್ಣ, ವಿವೇಕ್, ತಾಲೂಕು ಮಟ್ಟದ ಅಧಿಕಾರಿಳು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆ ಮತ್ತು ಶಿಕ್ಷಣ ಕಾರ್ಯಾಗಾರ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಎನ್‌ಸಿಸಿ ಮತ್ತು ಭಾರತೀಯ ಸೇವಾದಳ ಉದ್ಘಾಟನೆ

Suddi Udaya

ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆಯ ಸಿಬ್ಬಂದಿ ಪ್ರವೀಣ್ ಕುಮಾರ್ ರವರಿಗೆ ಪ್ರಶಸ್ತಿ

Suddi Udaya

ಐಸಮ್ಮರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ ಹಾಗೂ ಶ್ರೀ ಬಲರಾಮರ ಜಯಂತಿ ಆಚರಣೆ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya
error: Content is protected !!