30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸವಣಾಲು: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಯುವಕರು; ಅದೃಷ್ಟವಶಾತ್ ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ನದಿಯಲ್ಲಿ ಯುವಕರೀರ್ವರು ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಬದುಕಿ ಉಳಿದ ಘಟನೆ ಜೂ. 15 ರಂದು ನಡೆದಿದೆ.

ಸವಣಾಲು ಗ್ರಾಮದ ಮಂಜದಬೆಟ್ಟುವಿನಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಪ್ರದೇಶವನ್ನು ಸಂಪರ್ಕಿಸುವ ಕೂಡುಜಾಲು ಎಂಬಲ್ಲಿ ಹರಿಯುತ್ತಿರುವ ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ ಸುಳ್ಯೋಡಿ ನಿವಾಸಿ ಸಂಜೀವ ಪೂಜಾರಿ ಎಂಬವರು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ನದಿಯನ್ನು ಬೈಕ್ ಸಮೇತ ದಾಟುವ ಸಂದರ್ಭದಲ್ಲಿ ನದಿ ನೀರಿನಲ್ಲಿ ಕೊಚ್ಚಿ ಹೋಗಿರುತ್ತಾರೆ. ಅದೃಷ್ಟವಶಾತ್ ಬೈಕ್ ನದಿ ಬದಿಯಲ್ಲಿ ಸಿಲುಕಿದ್ದು , ಯುವಕರಿಬ್ಬರು ಯಾವುದೋ ಬಳ್ಳಿಯ ಸಹಾಯದಿಂದ ಸಿನಿಮೀಯ ರೀತಿಯಲ್ಲಿ ಬದುಕುಳಿದಿದ್ದಾರೆ.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಐಸಿವೈಎಮ್ ಘಟಕದ ಕ್ರಿಸ್ಮಸ್ ಟ್ಯಾಬ್ಲೊ

Suddi Udaya

ಮಚ್ಚಿನ: ಆಕಸ್ಮಿಕವಾಗಿ ಮನೆಯ ಹಟ್ಟಿಗೆ ಬೆಂಕಿ : ಅಪಾರ ನಷ್ಟ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ

Suddi Udaya

ಅಡುಗೆ ಕೆಲಸಕ್ಕೆ ಹೋದ ಮುಂಡಾಜೆ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ ನಾಪತ್ತೆ: ಪತ್ನಿಯಿಂದ ಪೊಲೀಸರಿಗೆ ದೂರು

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನ ಗ್ರಾಮ ಸಭೆ

Suddi Udaya

ಗುರುವಾಯನಕೆರೆ ದೈವಾರಾಧಕರ ಮಹಾ ಸಮಾವೇಶದಲ್ಲಿ ಎಕ್ಸೆಲ್ ಕಲಾ ವೈಭವ

Suddi Udaya
error: Content is protected !!