25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನ ಎನ್ ಸಿ ಸಿ ಕ್ಯಾಡೆಟ್‌ಗಳು ಶ್ರೀನಗರದಲ್ಲಿ ನಡೆಯುವ ವಿಶೇಷ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಇಲ್ಲಿನ ಐವರು ಎನ್ ಸಿ ಸಿ ಕ್ಯಾಡೆಟ್‌ಗಳು ಶ್ರೀನಗರದಲ್ಲಿ ನಡೆಯುವ ವಿಶೇಷ ರಾಷ್ಟ್ರೀಯ ಏಕತಾ ಶಿಬಿರಕ್ಕೆ (SNIC) ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಲು ಆಯ್ಕೆಗೊಂಡಿದ್ದಾರೆ.


ಜೆ.ಯು.ಓ ಯಶ್ವಿತಾ, ಸರ್ಜಂಟ್ ಆಲ್ವಿನ್ ಡಿಸೋಜಾ, ಕ್ಯಾಡೆಟ್ ನವ್ಯಾ, ಕ್ಯಾಡೆಟ್ ಕೃತಿ ಮತ್ತು ಕ್ಯಾಡೆಡ್ ಅನೀಶ್ ಆಯ್ಕೆಗೊಂಡವರು. ವಿವಿಧ ಕಾಲೇಜುಗಳ ಎನ್ ಸಿ ಸಿ ಕ್ಯಾಡೆಟ್‌ಗಳನ್ನು ಒಳಗೊಂಡ ಈ ತಂಡವು ಜೊತೆಯಲ್ಲಿ ಶ್ರೀನಗರಕ್ಕೆ ತೆರಳುತ್ತಿದೆ.


ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯದ ಈ ತಂಡದ ಮುಖ್ಯಸ್ಥರಾಗಿ ಸೆಕ್ರೆಟ್ ಹಾರ್ಟ್ ಕಾಲೇಜಿನ ಎನ್ .ಸಿ. ಸಿ ಅಧಿಕಾರಿ ಲೆಫ್ಟಿನೆಂಟ್ ಆಲ್ವಿನ್ ಕೆ.ಜಿ ಅವರನ್ನು ನೇಮಕ ಮಾಡಲಾಗಿದೆ.
ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಕರ್ನಾಟಕ-ಗೋವಾ ನಿರ್ದೇಶನಾಲಯವನ್ನು ರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸುತ್ತಿರುವುದಕ್ಕಾಗಿ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಸಿಬ್ಬಂದಿವರ್ಗ ಎನ್‌ಸಿಸಿ ವಿದ್ಯಾರ್ಥಿಗಳ ಮತ್ತು ಅಧಿಕಾರಿಯ ಈ ವಿಶೇಷ ಸಾಧನೆಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದೆ.

Related posts

ಬೆಳಾಲು ಶ್ರೀಧ.ಮ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ಕೊಕ್ಕಡ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆ ಹಾಗೂ ಇಸ್ಕಾನ್ ನ ಹರೀಶ್ ಭೇಟಿ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಸದಸ್ಯರು, ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರ ಮಾನವೀಯ ಸ್ಪಂದನೆ: ಪುದುವೆಟ್ಟುವಿನಲ್ಲಿ ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ನ ಓಲೈಕೆ ರಾಜಕಾರಣದಿಂದ ಶರಣ್ ಪಂಪುವೆಲ್ ರವರ ಮೇಲೆ ಕೇಸು ಖಂಡನೀಯ : ನವೀನ್ ನೆರಿಯ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ

Suddi Udaya

ಕುದ್ಯಾಡಿ ಸ. ಕಿ. ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!