September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಸುಲ್ಕೇರಿಯಲ್ಲಿ ಮನೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜ ಹಾಗೂ ಅಧಿಕಾರಿಗಳ ಭೇಟಿ, ಶೀಘ್ರ ಕ್ರಮಕ್ಕೆ ಸೂಚನೆ

ಸುಲ್ಕೇರಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮುಳ್ಳುಗುಡ್ಡೆ ನಿವಾಸಿ ಯಮುನಾ ಅಣ್ಣು ಪೂಜಾರಿಯವರ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ಮನೆಯೊಳಗೆ ನೀರು ತುಂಬಿ ನಿಲ್ಲಲಾರದ ಪರಿಸ್ಥಿತಿ ಎದುರಾಗಿದೆ.

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ನಾರಾಯಣ ಪೂಜಾರಿ ಅವರು ವಿಷಯ ತಿಳಿದ ಕೂಡಲೇ ಮನೆಗೆ ಆಗಮಿಸಿ, ಶಾಸಕರಿಗೆ ಹಾಗೂ ಸ್ಥಳಿಯ ಪಂಚಾಯತ್ ಆಡಳಿತ ವ್ಯವಸ್ಥೆಗೆ ಪ್ರಸ್ತಾಪಿಸಿ, ಮನೆ ಮಂದಿಯನ್ನು ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡುವಂತೆ ಮಾಡಿದ್ದಾರೆ.

ನಿನ್ನೆ ಘಟನಾ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಅವರು ಭೇಟಿ ನೀಡಿ ರೂ 10 ಸಾವಿರ ಆರ್ಥಿಕ ಸಹಕಾರ ನೀಡಿ ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಗಿರಿಜಾ, ಅಭಿವೃದ್ಧಿ ಅಧಿಕಾರಿ ಗಾಯತ್ರಿ, ಪಂಚಾಯತ್ ಸದಸ್ಯ ರವಿ ಪೂಜಾರಿ ಹಾರಡ್ಡೆ,ಕಾರ್ಯದರ್ಶಿ ಕೊರಗಪ್ಪ ನಾಯ್ಕ್ ಹಾಗೂ ಇತರರು ಭೇಟಿ ನೀಡಿ ಶೀಘ್ರ ಕ್ರಮ ಕೈಗೊಳ್ಳುವ ಬಗ್ಗೆ ಕ್ರಮ ವಹಿಸಿದರು.

Related posts

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಜಯಂತ್ ಟಿ ಹಾಜರು: ಒಳದಾರಿಯಲ್ಲಿ ಓಡಿ ಹೋಗಿ ಕಚೇರಿ ಪ್ರವೇಶ

Suddi Udaya

​ವಿದ್ಯಾಮಾತಾ ಅಕಾಡೆಮಿ, ಪುತ್ತೂರು: GPSTR, PSTR ಹಾಗೂ HSTR ಸರಕಾರಿ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಾಗಾರ!

Suddi Udaya
error: Content is protected !!