25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.22: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

ಉಜಿರೆ: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜೂ.22ರಂದು ಬೆಳಿಗ್ಗೆ 9.00ರಿಂದ ಮಧ್ಯಾಹ್ನ 1.00ರವರೆಗೆ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರವು ನಡೆಯಲಿದೆ.

ಶಿಬಿರದಲ್ಲಿ ತಜ್ಞ ವೈದ್ಯರುಗಳಾದ ಡಾ| ಬಾಲಾಜಿ ಪ್ರಭಾಕರನ್ MBBS MS (GENERAL SURGERY) ಜನರಲ್ ಸರ್ಜನ್,ಡಾ| ಕಿರಣ್ ಕುಮಾ‌ರ್ MBBS MS (GENERAL SURGERY)ಜನರಲ್ ಸರ್ಜನ್ ಪಾಲ್ಗೊಳ್ಳುವರು.

ಶಿಬಿರದಲ್ಲಿ ಸಾಮಾನ್ಯ ಶಸ್ತ್ರಚಿಕಿತ್ಸಾ ತಪಾಸಣೆ, ಹರ್ನಿಯಾ (ಕಿಬ್ಬೊಟ್ಟೆ, ತೊಡೆಸಂದು, ಹೊಕ್ಕಳು) ಕಡಿಮೆ ಮಾಡಬಹುದಾದ ಊತ, ಪಿತ್ತಕೋಶದ ಕಲ್ಲುಗಳು (ಕಿಬ್ಬೊಟ್ಟೆಯ ನೋವು, ಕಾಮಾಲೆ), ಅಪೆಂಡಿಸೈಟಿಸ್ (ಕೆಳಗಿನ ಬಲ ಹೊಟ್ಟೆ ನೋವು), ಮೂಲವ್ಯಾಧಿ, ಪಿಸ್ತುಲಾ, ವೃಷಣಗಳ ನೋವು ರಹಿತ ಊತ, ಚರ್ಮದ ಗಾಯಗಳು (ಗೆಡ್ಡೆಗಳು) ತಪಾಸಣೆ ನಡೆಯುವುದು.

ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿದ್ದು, 10% ರಿಯಾಯಿತಿ ದರದಲ್ಲಿ ಔಷಧ, ಒಳರೋಗಿ ವಿಭಾಗದ ಶುಲ್ಕದಲ್ಲಿ 20% ರಿಯಾಯಿತಿ, ಲ್ಯಾಬ್ ಹಾಗೂ ರೇಡಿಯಾಲಜಿ ಪರೀಕ್ಷೆಯಲ್ಲಿ 20% ರಿಯಾಯಿತಿ ದೊರೆಯಲಿದೆ.

ವಿ.ಸೂಚನೆ: ಸ೦ಪೂರ್ಣ ಸುರಕ್ಷಾ ವಿಮೆ ಹೊಂದಿರುವವರು ವಿಮಾ ಕಾರ್ಡಿನ ಪ್ರತಿಗಳನ್ನು ತರತಕ್ಕದ್ದು. ಹೆಸರು ನೋಂದಾಯಿಸಲು ಸಂಪರ್ಕಿಸಿ: 7760397878 / 8073349216

Related posts

ಉಜಿರೆ:ಧೀಮತಿ ಜೈನ ಮಹಿಳಾ ಸಮಾಜದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ನಕಲಿ ಚಿನ್ನದ ಹಾವಳಿ ತಡೆಗೆ ಶಾಸಕರಿಗೆ ಮನವಿ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ

Suddi Udaya

ಹಿರಿಯ ಸಹಕಾರಿ ಧುರೀಣ ಮಾಜಿ ಜಿ.ಪಂ. ಉಪಾಧ್ಯಕ್ಷ ನಿರಂಜನ ಬಾವಂತಬೆಟ್ಟು ನಿಧನ

Suddi Udaya
error: Content is protected !!