27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

ಬಳoಜ :ವಲಯದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದ ಆವರಣದಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ಅಶೋಕ್ ರವರು ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ , ಪರಿಸರ ಮಾಲಿನ್ಯದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಮನುಷ್ಯರು ಬದುಕ ಬೇಕಾದರೆ ಪರಿಸರ ನಮಗೆ ತೀರಾ ಅವಶ್ಯವಾಗಿ ಬೇಕು ಗಿಡವನ್ನು ನೆಟ್ಟು ಪಾಲನೆ ಪೋಷಣೆ ಮಾಡಿ ರಕ್ಷಿಸಬೇಕು ಎಂದು ಮಾಹಿತಿ ನೀಡಿದರು. ಯೋಜನೆಯಿಂದ ನಡೆಯುವ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ಪ್ರಮೋದ್ ಕುಮಾರ್ ಜೈನ ಮಾತನಾಡಿ ಕಾಡಿನಲ್ಲಿ ಹಣ್ಣಿನ ಗಿಡವನ್ನು ನಾಟಿ ಮಾಡುವುದರಿಂದ ಪ್ರಾಣಿ ಪಕ್ಷಿಗಳಿಗೆ ಆಹಾರ ಸಿಗುತ್ತದೆ ಹಾಗೂ ಕಾಡು ಪ್ರಾಣಿಗಳ ಹಾವಳಿ ಕಡಿಮೆಯಾಗುತ್ತದೆ , ಆದರಿಂದ ಎಲ್ಲರೂ ಗಿಡಗಳನ್ನು ನೆಟ್ಟು ಅದರ ರಕ್ಷಣೆ ಮಾಡಬೇಕು ಎಂದು ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ದೇಜಪ್ಪ ಪೂಜಾರಿ, ಬಳoಜ ಗ್ರಾಮ ಪಂಚಾಯತ್ ಸದಸ್ಯೆ & ವಿಪತ್ತು ಘಟಕದ ಬೇಬಿ ನಾರಾಯಣ, ಸ್ವಚ್ಛತಾ ಸೇನಾನಿ ಅಬೂಬಕರ್, ತಾಲೂಕು ನೋಡಲ್ ಅಧಿಕಾರಿ ಸುರೇಶ್ , ವಲಯದ ಮೇಲ್ವಿಚಾರಕಿ ಪದ್ಮಾವತಿ , ಸೇವಾಪ್ರತಿನಿಧಿ ಪ್ರಮೀಳಾ & ಪ್ರಗತಿ ಬಂಧು, ಸ್ವಸಹಾಯ & ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಬುರುಡೆ ಪ್ರಕರಣ ವಿಚಾರಣೆ ಫೆ.13ಕ್ಕೆ ಮುಂದೂಡಿಕೆ

Suddi Udaya

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ 354 ನೇ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಭಾ.ಜ.ಪಾ. ಉಜಿರೆ ಮಹಾಶಕ್ತಿ ಕೇಂದ್ರ ವತಿಯಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾದಲ್ಲಿ ವಿಶೇಷ ಪೂಜೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿನಿ ಭಗವದ್ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya
error: Content is protected !!