September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ : 33ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

ಅರಸಿನಮಕ್ಕಿ: ಸೇವಾಭಾರತಿ (ರಿ.), ಕನ್ಯಾಡಿ, ಇದರ ನೇತೃತ್ವದಲ್ಲಿ, ಸಬಲಿನಿ ಯೋಜನೆಯಡಿ, ಗ್ರಾಮ ಪಂಚಾಯತ್, ಅರಸಿನಮಕ್ಕಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 33 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವು ತುಂಬೆತ್ತಡ್ಕ ರಾಣೆಯರ್ ಸಭಾಭವನದಲ್ಲಿ ನಡೆಯಿತು.

ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ರಾಘವೇಂದ್ರ ನಾಯಕ್ ಬರ್ಗುಳ ಚಾಲನೆ ನೀಡಿ ಈ ಉಚಿತ ತರಬೇತಿ ಶಿಬಿರವು ಸ್ವ-ಉದ್ಯೋಗದ ಕಡೆಗೆ ಮಹತ್ವದ ಹೆಜ್ಜೆಯಾಗಲಿ ಎಂದು ಶುಭಹಾರೈಸಿದರು.

ಸೇವಾಭಾರತಿ ಕನ್ಯಾಡಿಯ ಅಧ್ಯಕ್ಷ ಹಾಗೂ ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ಸಿಇಒ ಸ್ವರ್ಣಗೌರಿ ಮಾತನಾಡಿ, ಟೈಲರಿಂಗ್ ಕಲಿಕೆ ಅನೇಕ ಉದ್ಯೋಗದ ಅವಕಾಶಗಳನ್ನು ಒದಗಿಸಬಲ್ಲದು. ಸ್ವ ಉದ್ಯೋಗವನ್ನು ಕಲಿತರೆ ನಮ್ಮ ಜೀವನವನ್ನು ನಾವೇ ರೂಪಿಸಿಕೊಂಡು ಸಮಾಜದಲ್ಲಿ ಬೆಳಗಬಹುದು ಎಂದರು.

ಸಮಾರಂಭದಲ್ಲಿ ತುಂಬೆತ್ತಡ್ಕ ಶ್ರೀ ಕಾಲಭೈರವೇಶ್ವರ ಸ್ವಾಮಿ ಮತ್ತು ಶ್ರೀ ಮಾರಿಯಮ್ಮ ದೇವಸ್ಥಾನದ ಅಧ್ಯಕ್ಷ ಸುರೇಶ್ ವಿ, ಅರಸಿನಮಕ್ಕಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಧೀರ್ ಎಂ ಎಸ್, ಸೇವಾಧಾಮ ಸಂಸ್ಥಾಪಕ ಕೆ. ವಿನಾಯಕ ರಾವ್, ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿರ್ದೇಶಕಿ ಶ್ರೀಮತಿ ಬೇಬಿ, ಕನ್ಯಾಡಿ ಶ್ರೀ ದುರ್ಗಾ ಮಾತೃ ಮಂಡಳಿ ಖಜಾಂಚಿ ಶ್ರೀಮತಿ ಬಬಿತಾ, ಅರಸಿನಮಕ್ಕಿ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರಾದ ಶ್ರೀಮತಿ ನೀತಾ ರಾಧೇಶ್ ಆಚಾರ್ಯ, ಟೈಲರಿಂಗ್ ತರಬೇತುದಾರರಾದ ಶ್ರೀಮತಿ ಪ್ರತಿಮಾ ಉಪಸ್ಥಿತರಿದ್ದರು.

ಶಿಬಿರದಲ್ಲಿ ಒಟ್ಟು 40 ಮಂದಿ ಮಹಿಳಾ ಶಿಬಿರಾರ್ಥಿಗಳು ಭಾಗವಹಿಸಿದ್ದು, ಮಹಿಳಾ ಸಬಲಿಕರಣದತ್ತ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಕಾರ್ಯಕ್ರಮದಲ್ಲಿ ಶ್ರೀಮತಿ ಸುನಂದಾ ಸ್ವಾಗತಿಸಿ, ಸೇವಾಭಾರತಿಯ ಡಾಕ್ಯುಮೆಂಟೇಶನ್, ಮೋನಿಟರಿಂಗ್ ಮತ್ತು ಇವ್ಯಲ್ಯೂಯೇಷನ್ ಕೋ – ಆರ್ಡಿನೇಟರ್ ಸುಮ ನಿರೂಪಿಸಿದರು. ಶ್ರೀಮತಿ ಆಶಾ ವಂದಿಸಿದರು.

Related posts

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮುಳಿಯ ಜುವೆಲ್ಸ್ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಉಜಿರೆಯಲ್ಲಿ ರೈತ ಉತ್ಪಾದಕರ ಕಂಪನಿ ಉದ್ಘಾಟನೆ ಹಾಗೂ ಷೇರು ಪ್ರಮಾಣ ಪತ್ರ  ವಿತರಣೆ

Suddi Udaya

ಬೆಳ್ತಂಗಡಿ–ಗುರುವಾಯನಕೆರೆ ಭಜನಾ ಪರಿಷತ್ತಿನ ಸಭೆ

Suddi Udaya
error: Content is protected !!