March 7, 2026
ಶಾಲಾ ಕಾಲೇಜು

ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ಸರಕಾರಿ ಶಾಲೆಗಳಿಗೆ ನೀಡಲಾಗುವ ಉಚಿತ ನೋಟ್ ಪುಸ್ತಕ ಗಳ ವಿತರಣೆ

ಗೇರುಕಟ್ಟೆ :ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ಸರಕಾರಿ ಶಾಲೆಗಳಿಗೆ ನೀಡಲಾಗುವ ಉಚಿತ ನೋಟ್ ಪುಸ್ತಕ ಗಳ ವಿತರಣಾ ಕಾರ್ಯಕ್ರಮವು ಜೂ 17.ರಂದು ಸರಕಾರಿ ಪ್ರೌಢಶಾಲೆ ಗೇರುಕಟ್ಟೆ ನಡೆಯಿತು.

ಕಳಿಯ ಗ್ರಾಮ ಪಂಚಾಯತಿನ ಉಪಾಧ್ಯಕ್ಷರಾದ ಶ್ರೀಮತಿ ಇಂದಿರಾ ಬಿ. ಶೆಟ್ಟಿ ಹಾಗೂ ಎಸ್ಡಿಎಂಸಿ ಉಪಾಧ್ಯಕ್ಷರಾದ ಶ್ರೀ ಗೋಪಾಲಗೌಡ ಮುದ್ದುಂಜ ಇವರ ನೇತೃತ್ವದಲ್ಲಿ 8,9,10ನೇ ತರಗತಿ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. , ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಇಂದಿರಾ ಮಾತನಾಡಿ ವಿದ್ಯೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ, ನೀಡಿರುವಂತಹ ಉಚಿತ ನೋಟ್ ಪುಸ್ತಕಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪರಿಣಾಮಕಾರಿಯಾಗಲಿ ಎಂದು ಹಾರೈಸಿದರು. ಎಸ್. ಡಿ.ಎಂ. ಸಿ. ಉಪಾಧ್ಯಕ್ಷರಾದ ಶ್ರೀ ಗೋಪಾಲಗೌಡ ಇವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಸುಂದರ ಭಾರತ ಪ್ರತಿಷ್ಠಾನದವರಿಗೆ ಅಭಿನಂದನೆಯನ್ನು ಸಲ್ಲಿಸಿದರು. ಶಾಲಾ ಮುಖ್ಯ ಶಿಕ್ಷಕರಾದ ಈಶ್ವರಿ ಕೆ. ಇವರು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವುದನ್ನು ತಪ್ಪಿಸಲು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಂಘ ಸಂಸ್ಥೆಗಳವರು ನೀಡುವ ಇಂತಹ ಕೊಡುಗೆಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾಗಲಿವೆ. ಇನ್ನೂ ಹೆಚ್ಚಿನ ಸಹಕಾರ ಸಂಘ-ಸಂಸ್ಥೆಗಳಿಂದ, ಊರ ದಾನಿಗಳಿಂದ, ಹಿರಿಯ ವಿದ್ಯಾರ್ಥಿಗಳಿಂದ ದೊರೆಯಲಿ ಎಂದು ಹಾರೈಸಿ, ಸುಂದರ ಭಾರತ ಪ್ರತಿಷ್ಠಾನ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಶಾಲಾ ಶಿಕ್ಷಕರು ಪ್ರತಿಷ್ಠಾನದವರಿಗೆ ಕೃತಜ್ಞತೆಗಳನ್ನು ತಿಳಿಸುತ್ತಾ ಪುಸ್ತಕ ವಿತರಣೆಗೆ ಸಹಕರಿಸಿದರು.

Related posts

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಉಜಿರೆ ಎಸ್.ಡಿ.ಎಂ. (ಜನಾರ್ದನ ) ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ 

Suddi Udaya

ಜ.6: ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ

Suddi Udaya

ಮೂಡುಬಿದಿರೆ ತಾಲೂಕು ಮಟ್ಟದ ವಿಜ್ಞಾನ ಸ್ಪರ್ಧೆಗಳು -2025ಭಾರತದ ಯುವಜನತೆ ವೈಜ್ಞಾನಿಕ ಕ್ಷೇತ್ರಕ್ಕೆ ಕೊಡುಗೆಯನ್ನು ನೀಡುವ ಶಕ್ತಿಯಾಗಬೇಕು- ಶ್ರೀಮತಿ ರಶ್ಮಿತಾ ಜೈನ್

Suddi Udaya
error: Content is protected !!