32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ಎನ್.ಎ.ಬಿ.ಹೆಚ್ ರಾಷ್ಟ್ರೀಯ ಮಾನ್ಯತೆ ಘೋಷಣೆ: ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಸೆಂಟರ್ ಉದ್ಘಾಟನೆ, ನವೀಕೃತ ಸುಧಾರಿತ ಪ್ರಯೋಗಾಲಯ ಉದ್ಘಾಟನೆ

ಕಕ್ಕಿಂಜೆ: ಇಲ್ಲಿಯ ವೈದ್ಯಕೀಯ ಕ್ಷೇತ್ರದಲ್ಲಿ ಹೆಸರುವಾಸಿಯಾದ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ NABH ರಾಷ್ಟ್ರೀಯ ಮಾನ್ಯತೆ ಘೋಷಣೆ, ನವೀಕೃತ ಸುಧಾರಿತ ಪ್ರಯೋಗಾಲಯ ವಿಭಾಗ, ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಔಟ್ರೀಚ್ ಸೆಂಟರ್ ಉದ್ಘಾಟನಾ ಸಮಾರಂಭವು ಜೂ.17 ರಂದು ನಡೆಯಿತು.

ಮಂಗಳೂರು ಕೆಎಂಸಿ ಜನರಲ್ ಮೆಡಿಸಿನ್ ವಿಭಾಗದ ಪ್ರೊಫೆಸರ್, ವೈದ್ಯಕೀಯ ಅಧೀಕ್ಷಕರು ಡಾ| ಚಕ್ರಪಾಣಿ ಎಂ.ಉದ್ಘಾಟಿಸಿ ಎನ್.ಎ.ಬಿ.ಹೆಚ್ ರಾಷ್ಟ್ರೀಯ ಮಾನ್ಯತೆ ಘೋಷಣೆ ಮಾಡಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತಾಲೂಕು ಐಎಂಎ ಅಧ್ಯಕ್ಷರು, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಡಾ| ಸ್ವರ್ಣಲತಾ ರವರು ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಸೆಂಟರ್ ನ್ನು ಉದ್ಘಾಟಿಸಿದರು. ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ನ ಮುಖ್ಯ ಇನ್ಫರ್ಟಿಲಿಟಿ ಕನ್ಸಲ್ವೆಂಟ್ ಡಾ| ಗೌರವ್ ಗುಜರಾತಿ ರವರು ನವೀಕೃತ ಸುಧಾರಿತ ಪ್ರಯೋಗಾಲಯ ಉದ್ಘಾಟಿಸಿದರು.

ಬೆಳ್ತಂಗಡಿ ತುಳು ಶಿವಳ್ಳಿ ಸಭಾದ ಅಧ್ಯಕ್ಷ ರಾಜಪ್ರಸಾದ ಪೊಳ್ನಾಯ, ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ| ಮುರಳಿಕೃಷ್ಣ ಇರ್ವತ್ರಾಯ , ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಡಾ. ವಂದನಾ ಎಂ. ಇರ್ವತ್ರಾಯ,ಆಡಳಿತಧಿಕಾರಿ ಜ್ಯೋತಿ ವಿ ಸ್ವರೂಪ್ ಉಪಸ್ಥಿತರಿದ್ದರು.

ಆಸ್ಪತ್ರೆಯು ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ,ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್, ಹೊಯ್ಸಳ ಹೆಲ್ತ್ ಕೇರ್ ಮೂಡಿಗೆರೆಯಲ್ಲಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಡಾ.ಮುರಳಿಕೃಷ್ಣ ಇರ್ವತ್ರಾಯ ಸ್ವಾಗತಿಸಿ,ಆರೀಸ್ ಕಾರ್ಯಕ್ರಮ ನಿರೂಪಿಸಿದರು. ಡಾ.ವಂದನಾ ಎಂ ವಂದಿಸಿದರು. ಡಾ.ಆಲ್ಬಿನ್ ಜೋಸೆಫ್ ಸನ್ಮಾನಿತರ ಪರಿಚಯ ವಾಚಿಸಿದರು.

Related posts

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ್ದ ರಘುಪತಿ. ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಲಾಯಿಲ ಕುಂಟಿನಿಯಿಂದ ನಡ, ಪುತ್ರಬೈಲು ಮೂಲಕ ಬೆಳ್ತಂಗಡಿ ಮತ್ತು ಕಿಲ್ಲೂರಿಗೆ ಸಂಪರ್ಕಿಸುವ ಕಿರಿದಾದ ಮಣ್ಣಿನ ಮತ್ತು ಕಾಂಕ್ರಿಟ್ ರಸ್ತೆ : ಭಾರೀ ಮಳೆಗೆ ರಸ್ತೆಯ ಎರಡು ಬದಿಗಳಲ್ಲಿ ಮಣ್ಣು ಕುಸಿದು ಅಪಾಯವನ್ನು ಆಹ್ವಾನಿಸುವ ಮುನ್ಸೂಚನೆ

Suddi Udaya

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya
error: Content is protected !!