ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ನಲ್ಲಿ ವಿಶ್ವ ಪರಿಸರ ದಿನಾಚರಣೆ, ಉಜಿರೆ ಪೇಟೆಯವರೆಗೆ ವಿದ್ಯಾರ್ಥಿಗಳಿಂದ ಪರಿಸರ ಜಾಥಾ

ಉಜಿರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಉಜಿರೆ; ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರು; ತಾಲೂಕು ಕಾನೂನು ಸೇವಾ ಸಮಿತಿ ಬೆಳ್ತಂಗಡಿ; ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಪರಿಸರ ಜಾಥಾ ಸಿದ್ಧವನ ವೃತ್ತದಿಂದ ಉಜಿರೆ ಪೇಟೆಯವರೆಗೆ ಸಾಗಿತು.

ಜಾಥಾಕ್ಕೆ ವಕೀಲರ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷರಾದ ವಸಂತ ಮರಕಡ ಚಾಲನೆ ನೀಡಿದರು.

ನಂತರ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಸಿರಸಿ ಪರಿಸರ ಬರಹಗಾರ, ಪರಿಸರ ತಜ್ಞ ಶಿವಾನಂದ ಕಳವೆ ದೀಪ ಪ್ರಜ್ವಲಿಸಿ ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ‌.ಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ‌.ಅಶೋಕ್ ಕುಮಾರ್ ವಹಿಸಿದ್ದರು.

ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ತುಳಪುಳೆ,ಎಸ್.ಡಿ.ಎಂ ಪಿಯು ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಉಪಸ್ಥಿತರಿದ್ದರು.

ಪರಿಸರ ಉಪನ್ಯಾಸವನ್ನು ಡಾ.ಹೆಚ್. ಲಕ್ಷ್ಮೀಕಾಂತ, ಪರಿಸರ ಅಧಿಕಾರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು, ನೀಡಿದರು.

ಎಸ್.ಡಿ.ಎಂ ಸೆಕಂಡರಿ ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆಗೈದರು. ಪ್ರಾಧ್ಯಾಪಕ ಡಾ.ಶ್ರೀಧರ ಭಟ್ಟ ಕಾರ್ಯಕ್ರಮ ನಿರೂಪಿಸಿದರು. ಶ್ರೀ.ಧ.ಮಂ.ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ ವಿಶ್ವನಾಥ ಸ್ವಾಗತಿಸಿದರು.ಬಳಿಕ ಎಸ್.ಡಿ.ಎಂ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

Related posts

ಮೇಲಂತಬೆಟ್ಟು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಎಸ್.ಡಿ.ಎಂ. ನೆನಪಿನಂಗಳ ವಾರ್ಷಿಕ ಪುನರ್ಮಿಲನ: ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಬ್ಬರಿಗೆ ಸನ್ಮಾನ

Suddi Udaya

ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದೀಪಾವಳಿ ಆಚರಣೆ

Suddi Udaya

ಜೂ.30: ಅಳದಂಗಡಿ ಸ.ಪ.ಪೂ ಕಾಲೇಜಿನ ಉಪನ್ಯಾಸಕ ಹರೀಶ್ ರೈ ವಯೋನಿವೃತ್ತಿ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆ

Suddi Udaya
error: Content is protected !!