23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ “ಏಕ್ ಪೇಡ್ ಮಾ ಕೇ ನಾಮ್ ” ಕಾರ್ಯಕ್ರಮ

ಪದ್ಮುಂಜ : ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿ., ಮಂಗಳೂರು ಸಹಕಾರ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ 2025ರ ಪ್ರಯುಕ್ತ “ಸಹಕಾರ ಸಂಸ್ಥೆಗಳು ಉತ್ತಮ ಜಗತ್ತನ್ನು ನಿರ್ಮಿಸುತ್ತದೆ” ಎಂಬ ಧ್ಯೇಯದೊಂದಿಗೆ “ಏಕ್ ಪೇಡ್ ಮಾ ಕೇ ನಾಮ್ ” ಕಾರ್ಯಕ್ರಮ ಜೂ.17 ರಂದು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ನೆರವೇರಿಸಿದರು.

ಅಧ್ಯಕ್ಷತೆಯನ್ನು ಮಂಗಳೂರು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾ‌ರ್ ರೈ ಬಾಲ್ಗೊಟ್ಟು ವಹಿಸಿದರು.
ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ರಕ್ಷಿತ್ ಪಣಿಕ್ಕರ ಏಕ್ ಪೇಡ್ ಮಾ ಕೇ ನಾಮ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

777216

ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಡಾ| ಎಸ್. ಆರ್. ಹರೀಶ್ ಆಚಾರ್ಯ ವಿಷಯ ಮಂಡಿಸಿದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ , ದ. ಕ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಸತೀಶ್ ಕೆ., ಪ್ರವೀಣ್ ಗಿಲ್ಬರ್ಟ್ ಪಿಂಟೊ , ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಹೆಚ್. ಎನ್. ರಮೇಶ್, ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಸ್. ಎನ್. ರಘು , ಉಪ್ಪಿನಂಗಡಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕುಮಾರಿ ಹಸ್ತ ಶೆಟ್ಟಿ (ಪ್ರೊಬೇಶನರಿ), ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ರಾಘವೇಂದ್ರ ಉಪಸ್ಥಿತರಿದ್ದರು.

777216

ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷ ನೀಲಯ ಎಂ. ಅಗರಿ, , ಬೆಂಗಳೂರು ಕ.ರಾ.ಸ.ಮ.ಮಂ. ನಿ. ಪ್ರಭಾರ ಸಹಕಾರ ಶಿಕ್ಷಣಾಧಿಕಾರಿ ಶರಣಬಸಪ್ಪ ಕಾಟ್ರಳ್ಳಿ, ಪದ್ಮುಂಜ ಪ್ರಾಥಮಿಕ ಕೃ.ಪ.ಸ. ಸಂಘದ ಉಪಾಧ್ಯಕ್ಷ ಅಶೋಕ ಪಿ., ಪದ್ಮುಂಜ ಪ್ರಾ. ಕೃ.ಪ.ಸ. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಂಕಿತಾ ಬಿ. , ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪದ್ಮಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಸ್ವಾಗತಿಸಿ, ನಿರ್ದೇಶಕ ಉದಯಕುಮಾರ್ ಕಾರ್ಯಕ್ರಮ ನಿರೂಪಿಸಿ , ಜಿಲ್ಲಾ ಸಹಕಾರಿ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ವಿ. ಹಿರೇಮಠ ಧನ್ಯವಾದವಿತ್ತರು.

Related posts

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

Suddi Udaya

ಮುಂಡಾಜೆ ಶಾಲೆಯಲ್ಲಿ ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮತ ಚಲಾವಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆಉಡುಪಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು

Suddi Udaya

ಬೆಳ್ತಂಗಡಿ : ಸಂತ ತೆರೇಸಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!