September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟು ಗೈಡ್ ಶಿಕ್ಷಕರಿಗೆ ಚೇತರಿಕಾ ಶಿಬಿರ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಹೊಸದಾಗಿ ತರಬೇತಿಗೊಂಡು ಆಗಮಿಸಿದ ಸ್ಕೌಟ್ ಗೈಡ್ ಶಿಕ್ಷಕರಿಗೆ ಚೈತನ್ಯ ತುಂಬುವ ಚೇತರಿಕಾ ಶಿಬಿರ ನಡೆಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ ಮುರಳಿಧರ್ ಆಗಮಿಸಿ ಶಿಕ್ಷಕರಿಗೆ ಸ್ಕಾರ್ಫ್ ತೊಡಿಸಿ, ಪ್ರತಿಜ್ಞಾವಿಧಿಯನ್ನು ವಾಚಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಇನ್ಸ್ಪೆಕ್ಟರ್ ಮುರುಳಿಧರ್ ರವರು ಮಾತನಾಡಿ ಸ್ಕೌಟ್ ಗೈಡ್ ನ ಮಹತ್ವ ಸಮಾಜಕ್ಕೆ ಒಂದು ಮಾದರಿ ಹಾಗೆಯೇ ಮಕ್ಕಳು ಶಿಸ್ತು, ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬಹುದು ಎಂಬುದನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು. ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಕ್ಷಕರಿಗೆ ಅಭಿನಂದನೆಯನ್ನು ತಿಳಿಸಿದರು. ಸ್ಕೌಟ್ ಮಾಸ್ಟರ್ ಗಳಾದ ಮಂಜುನಾಥ್, ಜಯರಾಮ್, ಶ್ರೀಮತಿ ರಮ್ಯ ,ಶ್ರೀಮತಿ ಗೀತಾ ಪಿ, ಕಬ್ ಮಾಸ್ಟರ್ ಗಳಾದ ಶ್ರೀಮತಿ ನೀತಾ ಕೆ ಎಸ್, ಶ್ರೀಮತಿ ಜಯಲಕ್ಷ್ಮಿ, ಪ್ಲಾಕ್ ಲೀಡರ್ ಪ್ರಮೀಳಾ ಉಪಸ್ಥಿತರಿದ್ದರು. ಕಬ್ ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಪ್ರಮೀಳಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಕ್ಕಡ: ಕಾಡಾನೆ ಪ್ರತ್ಯಕ್ಷ

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಮಚ್ಚಿನ ಗ್ರಾ.ಪಂ. ನಿಂದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಪಣೆಯನ್ನು ಎಲ್ ಇ ಡಿ ಪರದೆ ಮೂಲಕ ವೀಕ್ಷಣೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾ ಮತ್ತು ಕರಕುಶಲ ಚಟುವಟಿಕೆ

Suddi Udaya

ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಪ್ರಜಾಪ್ರಭುತ್ವದ ದೊಡ್ಡ ಹಬ್ಬದಲ್ಲಿ ಸಂಭ್ರಮಸಿದ ಬಳಂಜ- ನಾಲ್ಕೂರಿನ ಮತದಾರರು ಬಿರುಸಿನ ಮತದಾನ, ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ

Suddi Udaya
error: Content is protected !!