23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ನದಿಯಲ್ಲಿ ಜೂ.೧೫ರಂದು ಯುವಕರೀರ್ವರು ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಬದುಕಿದ ಘಟನಾ ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಜೂ. 17 ರಂದು ಭೇಟಿ ನೀಡಿದರು.


ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ ಸುಳ್ಯೋಡಿ ನಿವಾಸಿ ಸಂಜೀವ ಪೂಜಾರಿ ಎಂಬವರು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ನದಿಯನ್ನು ಬೈಕ್ ಸಮೇತ ದಾಟುವ ಸಂದರ್ಭದಲ್ಲಿ ನದಿ ನೀರಿನಲ್ಲಿ ಕೊಚ್ಚಿ ಹೋಗಿ, ಅದೃಷ್ಟವಶಾತ್ ಬದುಕುಳಿದಿದ್ದಾರೆ.


ಈ ಪ್ರದೇಶ ಕುದುರೆಮುಖ ರಾಷ್ಟಿçÃಯ ಉದ್ಯಾನವನ ವ್ಯಾಪ್ತಿಯಲ್ಲಿದ್ದು, ಇಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಲು ಅರಣ್ಯ ಇಲಾಖೆಯ ಕಾನೂನುಗಳು ಅಡ್ಡಿಯಾಗಿದೆ. ಈ ಪ್ರದೇಶದ ವೀಕ್ಷಣೆ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಲು ಸರ್ಕಾರದ ಕೊಂಡಿಯಾಗಿ ಕಾರ್ಯನಿರ್ವಹಿಸಲು ರಕ್ಷಿತ್ ಶಿವರಾಂ ಭೇಟಿ ನೀಡಿದ್ದಾರೆ. ಈ ಪ್ರದೇಶದಲ್ಲಿ ಸುಮಾರು ೯ ಕುಟುಂಬಗಳು ವಾಸಿಸುತ್ತಿದ್ದು, ಇಲ್ಲಿ ಸುಮಾರು ೬೦ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಈ ಪ್ರದೇಶಕ್ಕೆ ಸಂವಿಧಾನ ಬದ್ದ ಮೂಲಭೂತ ಸೌಕರ್ಯಗಳಾದ ವಿದ್ಯುತ್, ರಸ್ತೆ ಸಂಪರ್ಕವಿಲ್ಲದೆ ಒಂದುವರೆ ಶತಮಾನಗಳೇ ಕಳೆದಿದೆ. ರಕ್ಷಿತ್ ಶಿವರಾಂ ರವರ ಭೇಟಿ ಸವಣಾಲು ಗ್ರಾಮದ ಆದಿವಾಸಿಗಳಲ್ಲಿ ಹೊಸ ಭರವಸೆ ಮೂಡಿಸಿದೆ.


ಈ ಸಂದರ್ಭದಲ್ಲಿ ಕಾಂಗ್ರೆಸ್ ಪರಿಶಿಷ್ಟ ಪಂಗಡದ ತಾಲೂಕು ಅಧ್ಯಕ್ಷ, ಆದಿವಾಸಿ ಮುಖಂಡ ಜಯಾನಂದ ಪಿಲಿಕಲ, ಯುವ ಕಾಂಗ್ರೆಸ್ ಅಧ್ಯಕ್ಷ ನವೀನ್ ಗೌಡ ಸವಣಾಲು, ಉಪಾಧ್ಯಕ್ಷರುಗಳಾದ ಅರುಣ್ ಲೋಬೊ, ವಿನಯ್ ಕುಮಾರ್ ಉಜಿರೆ, ಬೂತ್ ಸಮಿತಿ ಅಧ್ಯಕ್ಷ, ಪ್ರಗತಿಪರ ಕೃಷಿಕ ಮೋಹನ್ ರೈ ಸವಣಾಲು, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸದಸ್ಯ ಚಂದ್ರಶೇಖರ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಪಕ್ಷದ ನಾಯಕರು, ಆದಿವಾಸಿ ಮುಖಂಡರು ಉಪಸ್ಥಿತರಿದ್ದರು.

Related posts

ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

Suddi Udaya

ಸಿ ಎಸ್ ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅದ್ವಿತೀಯ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಾವೂರು: ನಿoರ್ದಿ ಬಳಿ ರಸ್ತೆಗೆ ಬಿದ್ದ ಮರ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ರವರಿಗೆ ಸ್ಪೂರ್ತಿ ಕುಮಾರ ಸೇವಾ ರತ್ನ ಪ್ರಶಸ್ತಿ

Suddi Udaya
error: Content is protected !!