September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಲೆಮರೆಸಿಕೊಂಡಿದ್ದ ಜ್ಯೋತಿಷಿಯನ್ನು ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ : ಶಿಕ್ಷೆ ಜಾರಿಯಾಗಿ ತಲೆಮರೆಸಿಕೊಂಡಿದ್ದ ಜ್ಯೋತಿಷ್ಯ ವೃತ್ತಿಯನ್ನು ಮಾಡುತ್ತಿರುವ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಮುಳಿಕ್ಕಾರ್ ನಿವಾಸಿ ಜ್ಯೋತಿಷ್ಯ ವೃತ್ತಿಯನ್ನು ಮಾಡುತ್ತಿರುವ ರಾಜೇಶ್.ಆರ್.ಶೆಣೈ (48) ಎಂಬಾತನಿಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯ ೩೬೮/೨೦೨೧ ರಲ್ಲಿ ಶಿಕ್ಷೆ ವಿಧಿಸಿತ್ತು.


ಬೆಳ್ತಂಗಡಿ ನ್ಯಾಯಾಲಯದಲ್ಲಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾದ ಬಳಿಕ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರಾಜೇಶ್.ಆರ್.ಶೆಣೈ ಎಂಬಾತನನ್ನು ಧರ್ಮಸ್ಥಳ ಪೊಲೀಸರು ಜೂ.18 ರಂದು ಧರ್ಮಸ್ಥಳ ಬಳಿ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಧೀಶರು ಆರೋಪಿಗೆ ರೂ.1,79,150 ದಂಡವನ್ನು ಪಾವತಿಸಲು ಮತ್ತು 3 ತಿಂಗಳ ನ್ಯಾಯಾಂಗ ಬಂಧನ ವಿಧಿಸಿ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.


ಬಂಟ್ವಾಳ ಉಪ ವಿಭಾಗದ ಉಪ ಅಧೀಕ್ಷಕ ವಿಜಯ್ ಪ್ರಸಾದ್ ನಿರ್ದೇಶನದಂತೆ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಆರ್ ಗಾಣಿಗೆರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಸಿಬ್ಬಂದಿ ವೃಷಭ ಮತ್ತು ಚರಣ್ ರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಶಾಲಾ ವಾರ್ಷಿಕೋತ್ಸವ ಮತ್ತು ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಮಾ.9: ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ: ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ಪೊಲೀಸ್ ವಶ

Suddi Udaya

ಶಿರ್ಲಾಲು : ಬಿಲ್ಲವ ಸಮಾಜ ಬಾಂಧವರ 10ನೇ ವರ್ಷದ ‘ಕೆಸರು ಗದ್ದೆ’ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!