25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮವಾಗಿ ಮನೆಯಲ್ಲಿ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ವಶ

ಬೆಳ್ತಂಗಡಿ : ಓಡಿನ್ನಾಳ ಗ್ರಾಮದ ಪಣೆಜಾಲು ಎಂಬಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಉಲಾಯಿ- ಪಿದಾಯಿ ಜೂಜಾಟ ಆಡುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ ಮತ್ತು ಸಿಬ್ಬಂದಿ ದಾಳಿ ನಡೆಸಿ ಒಂಬತ್ತು ಮಂದಿಯನ್ನು ಬಂಧಿಸಿದ ಘಟನೆ ಜೂ. 17 ರಂದು ಸಂಜೆ ನಡೆದಿದೆ.

ದಾಳಿ ವೇಳೆ ಜೂಜಾಟದಲ್ಲಿ ನಿರತರಾಗಿದ್ದ ಒಂಬತ್ತು ಮಂದಿಯನ್ನು ಬಂಧಿಸಿದ್ದು. ಸ್ಥಳದಲ್ಲಿ ಜೂಜಾಟಕ್ಕೆ ಬಳಸಿದ ಎಲೆಗಳನ್ನು , 6 ಮೊಬೈಲ್ ಫೋನ್, 2 ಬೈಕ್, 1 ಆಟೋ ರಿಕ್ಷಾ, 26,778 ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ 78,80 KP Act -1963 ಮತ್ತು ಕಲಂ 112(1) BNS 23 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ , ಸಬ್ ಇನ್ಸ್ಪೆಕ್ಟರ್ ಮುರುಳಿಧರ್ ನಾಯ್ಕ್, ಸಬ್ ಇನ್ಸ್ಪೆಕ್ಟರ್ ಮಲ್ಲಪ್ಪ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು, ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ಜೆಸಿ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ರೈತರ, ಜನ ಸಾಮಾನ್ಯರ ಬಜೆಟ್: ರಕ್ಷಿತ್ ಶಿವರಾಂ

Suddi Udaya

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya
error: Content is protected !!