September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಬೆಳ್ತಂಗಡಿ: ನಾಗರಿಕ ಸೇವಾ ಟ್ರಸ್ಟ್ ಪ್ರವರ್ತಿತ ಶಾಂತಿ ಸ್ವಸಹಾಯ ಸಂಘ, ರೆಖ್ಯ ಇವರ ವತಿಯಿಂದ ಸರ್ಕಾರಿ ಪ್ರೌಢಶಾಲೆ, ನೇಲ್ಯಡ್ಕದಲ್ಲಿ ಎಂಟನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ಹಾಗೂ ಕಂಪಾಸ್ ಬಾಕ್ಸ್ ಇವುಗಳನ್ನು ಶಾಂತಿ ಸ್ವಸಹಾಯ ಸಂಘದ ವತಿಯಿಂದ ವಿತರಿಸಲಾಯಿತು.

ಜೊತೆಗೆ ಹೊಸದಾಗಿ ದಾಖಲಾದ ಎಲ್ಲಾ ವಿದ್ಯಾರ್ಥಿಗಳ ಶಾಲಾ ಶುಲ್ಕವನ್ನು ಸ್ವಸಹಾಯ ಸಂಘದ ಸದಸ್ಯರು ಪ್ರಾಯೋಜಿಸಿದರು. ಸ್ವಸಹಾಯ ಸಂಘದ ಅಧ್ಯಕ್ಷ ವಿಜಯಕುಮಾರ್ , ಕಾರ್ಯದರ್ಶಿ ರಾಜು ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಶಾಲಾ ಶುಲ್ಕವನ್ನು ನೀಡಿ ಶುಭ ಹಾರೈಸಿದರು.

ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಜೇಂದ್ರ ಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿ ಶಾಂತಿ ಸ್ವಸಹಾಯ ಸಂಘದ ಸದಸ್ಯರ ಸಮಾಜಮುಖಿ ಸೇವೆಯನ್ನು ಶ್ಲಾಘಿಸಿದರು.

ವಿಜಯಕುಮಾರ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಅರವಿಂದ ಗೋಖಲೆ ಸ್ವಾಗತಿಸಿ, ಉದಯಕುಮಾರ್ ವಂದಿಸಿದರು.
ಸಂಸ್ಥೆಯ ಎಲ್ಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಮಕ್ಕಳಿಂದ ನಿರಂತರ ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ: ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ನೀಡಿದ ದ.ಕ ಜಿಲ್ಲಾ ಪತ್ರಕರ್ತರ ಸಂಘ- ಕಟೀಲ್

Suddi Udaya

ನಾವೂರು: ಕಿರ್ನಡ್ಕ ನಲಿಕೆ ಸಮುದಾಯದ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜರಿಂದ ಗಂಗಾ ಕಲ್ಯಾಣ ಯೋಜನೆಯ ಬೋರುವೇಲ್ ಅನುಷ್ಠಾನ: ಗೌರವಾರ್ಪಣೆ

Suddi Udaya

ಎಸ್‌ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕೌಶಲ್ಯ ತರಬೇತಿ ಕಾರ್ಯಾಗಾರ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಶಿಶಿಲ ಗ್ರಾ.ಪಂ. ವತಿಯಿಂದ ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya
error: Content is protected !!