July 24, 2026
ವರದಿಶಾಲಾ ಕಾಲೇಜು

ಬದುಕಿನ ಭವಿಷ್ಯದ ಕಠಿಣ ಹಾದಿಯ ಬಗ್ಗೆ ಪೋಷಕರು ಮಕ್ಕಳಿಗೆ ತಿಳಿಸಬೇಕು: ಯಾಕೂಬ್ ಎಸ್ ಕೊಯ್ಯೂರು

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಜೂ. 19ರಂದು 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪೋಷಕರ ಮಹಾಸಭೆ ಮತ್ತು ಮಾಹಿತಿ ಕಾರ್ಯಗಾರವು ಶಾಲಾ ಸಭಾಂಗಣದಲ್ಲಿ ನಡೆಯಿತು.

ಸಭಾ ವೇದಿಕೆಯಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಗಣಿತ ತಜ್ಞ ಹಾಗೂ ಪ್ರಸಕ್ತ ಕಾಯರ್ತಡ್ಕ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯಾಕೂಬ್ ಎಸ್ ಕೊಯ್ಯೂರು, ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್ ಸಾಹೇಬ್, ಕಾರ್ಯದರ್ಶಿ ಸಯ್ಯದ್ ಮಹಮ್ಮದ್ ಅಯ್ಯುಬ್, ಶಾಲಾ ಮುಖ್ಯ ಉಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ಉಪಸ್ಥಿತರಿದ್ದರು.ಸಂಪನ್ಮೂಲ ವ್ಯಕ್ತಿಯಾಗಿ ಪೋಷಕರೊಂದಿಗೆ ಸಂವಾದ ನಡೆಸಿದ ಯಾಕೂಬ್ ರವರು ಮಕ್ಕಳ ನಡತೆಯನ್ನು ಸರಿಪಡಿಸುವಲ್ಲಿ ಪೋಷಕರ ಪಾತ್ರ ಮಹತ್ವದ್ದು, ಎಂತಹ ವ್ಯಕ್ತಿಯನ್ನು ಬದಲಿಸುವ ಶಕ್ತಿ ತಾಯಿಗಿದೆ, ಅನೇಕ ಸಾಧಕರು ಸಾಗಿದ ಕಷ್ಟದ ಹಾದಿಯನ್ನು ಮಕ್ಕಳಿಗೆ ತಿಳಿಸಿ ಕಷ್ಟದ ಬದುಕಿನ ಅರಿವನ್ನು ಮೂಡಿಸಬೇಕು ಎಂದು ಹಲವಾರು ಉದಾಹರಣೆಗಳ ಮೂಲಕ ಪೋಷಕರಿಗೆ ಮನವರಿಕೆ ಮಾಡಿದರು.

2025-26 ನೇ ಸಾಲಿನ ಶಾಲಾ ವಾರ್ಷಿಕ ಚಟುವಟಿಕೆಗಳ ಕುರಿತು ಪೋಷಕರಿಗೆ ಮಾಹಿತಿಯನ್ನು ನೀಡಿದ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ರವರು ಮಕ್ಕಳನ್ನು ಭವಿಷ್ಯದ ಶ್ರೇಷ್ಠ ಪ್ರಜೆಯನ್ನಾಗಿಸುವುದು ಪೋಷಕರ ಕೈಯಲ್ಲಿದೆ ಎಂಬುದನ್ನು ಪ್ರಾತ್ಯಕ್ಷಿಕ ಚಟುವಟಿಕೆಯ ಮೂಲಕ ಪೋಷಕರಿಗೆ ವಿವರಿಸಿ ಮಗುವನ್ನು ಸರಿಯಾದ ದಾರಿಯಲ್ಲಿ ಬೆಳೆಸುವಲ್ಲಿ ಪೋಷಕರಿಗೆ ಮತ್ತು ಶಿಕ್ಷಕರಿಗೆ ದೇವರು ಮಾರ್ಗದರ್ಶನವನ್ನು ಮಾಡಲಿ ಎಂದು ಪ್ರಾರ್ಥಿಸಿದರು.

ಕಾರ್ಯಕ್ರಮದ ಕೊನೆಯಲ್ಲಿ ಶಾಲಾ ಅರೇಬಿಕ್ ಶಿಕ್ಷಣ ವಿಭಾಗದ ಮುಖ್ಯೋಪಾಧ್ಯಾಯರಾದ ಮುಹಮ್ಮದ್ ಶರೀಫ್ ಸಖಾಫಿ ಬೆದ್ರಬೆಟ್ಟು ಇವರು ಶಾಲಾ ಅರೇಬಿಕ್ ಶಿಕ್ಷಣದ ಬಗ್ಗೆ ಮಾಹಿತಿಯನ್ನು ನೀಡಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ‌: ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರಿ ಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

Suddi Udaya

ಉಜಿರೆಯ ಎಸ್.ಡಿ.ಎಂ ಕಾಲೇಜಿನ ಅಮಿತ್‌ ಕೆ ಜೈನ್ ಅವರಿಗೆ ಪಿ.ಎಚ್.ಡಿ ಪದವಿ

Suddi Udaya

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ಗೌರವ ನಮನ

Suddi Udaya
error: Content is protected !!