March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೂ.21: ಮೈಸೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ: ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜು, ಉಜಿರೆ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳು, ಶಾಂತಿವನ ಟ್ರಸ್ಟ್ನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು “ಪಯಣ” ವಿಂಟೇಜ್ ಕಾರುಗಳ ಸಂಗ್ರಹಾಲಯ, ಮೈಸೂರು- ಇವುಗಳ ಸಂಯುಕ್ತ ಆಶ್ರಯದಲ್ಲಿ ಜೂ.21 ರಂದು ಶನಿವಾರ ಬೆಳಿಗ್ಯೆ ಏಳು ಗಂಟೆಯಿಂದ ಮೈಸೂರಿನಲ್ಲಿ “ಪಯಣ” ಆವರಣದಲ್ಲಿರುವ ಸಭಾಭವನದಲ್ಲಿ ಹನ್ನೊಂದನೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಯೋಜಿಸಲಾಗಿದೆ ಎಂದು ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ ಮತ್ತು ಯೋಗ ನಿರ್ದೇಶಕ ಡಾ. ಶಶಿಕಾಂತ ಜೈನ್ ತಿಳಿಸಿದ್ದಾರೆ.


ಮೈಸೂರು ಶ್ರೀ ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಮುಕ್ತಿದಾನಂದಜೀ ಮಹಾರಾಜ್ ಸಮಾರಂಭವನ್ನು ಉದ್ಘಾಟಿಸುವರು.


ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯ ಸ್ವಾಮಿ, ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಬಂಡಿಸಿದ್ದೇಗೌಡ ಮತ್ತು ಮಾಜಿ ಸಚಿವ ಸಿ. ಎಸ್. ಪುಟ್ಟರಾಜು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭಾಶಂಸನೆ ಮಾಡುವರು.


ಮೈಸೂರಿನಲ್ಲಿ ವಿವಿಧ ಕೇಂದ್ರಗಳಲ್ಲಿ ಈಗಾಗಲೆ ಸಾರ್ವಜನಿಕರಿಗೆ ಯೋಗ ತರಬೇತಿ ಶಿಬಿರ ನಡೆಸಿದ್ದು, ಇಲ್ಲಿ ತರಬೇತಿ ಪಡೆದ 3500 ಮಂದಿ “ಪಯಣ”ದಲ್ಲಿ ನಡೆಯುವ ವಿಶ್ವಯೋಗ ದಿನಾಚರಣೆಯಲ್ಲಿ ಭಾಗವಹಿಸುವರು.


ಉಜಿರೆಯ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿ ಆಶ್ರಯದಲ್ಲಿ ನಡೆಸಲ್ಪಡುವ ಎಲ್ಲಾ 54 ಶಿಕ್ಷಣ ಸಂಸ್ಥೆಗಳಲ್ಲಿ ಕೂಡಾ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಡಾ.ಹೆಗ್ಗಡೆಯವರ ವ್ಯಕ್ತಿತ್ವದ ತೇಜೋವಧೆ: ಭಾರತೀಯ ಜೈನ್ ಮಿಲನ್ ಸಭೆಯಲ್ಲಿ ಖಂಡನಾ ನಿರ್ಣಯ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ‘ನವಚೇತನ’ ಶಿಬಿರ: ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಪೊಲೀಸರ ಪಾತ್ರ

Suddi Udaya

ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ನಡೆದ ದುರ್ಘಟನೆ ವಿದ್ಯುತ್ ತಂತಿ ಸ್ಪರ್ಶಿಸಿ ವೀರಪ್ಪ ಎಂಬವರು ಮೃತ್ಯು

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಶಿರ್ಲಾಲು ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜಾನಪದ ಕಡಲೋತ್ಸವ: ಜಿಲ್ಲಾ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯ ರವರು ಆಯ್ಕೆ

Suddi Udaya
error: Content is protected !!