September 6, 2026
ಆರೋಗ್ಯ

ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಬೆಳ್ತಂಗಡಿ- ಆರೋಗ್ಯ ಇಲಾಖೆ ಭೇಟಿ ಹಾಗೂ ಪರಿಸರ ದಿನಾಚರಣೆ

ಬೆಳ್ತಂಗಡಿ :ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಬೆಳ್ತಂಗಡಿ- ಆರೋಗ್ಯ ಇಲಾಖೆ ಭೇಟಿ ಹಾಗೂ ಪರಿಸರ ದಿನಾಚರಣೆ


ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಬೆಳ್ತಂಗಡಿ ಇದರ ಆಡಳಿತ ಮಂಡಳಿಯ ಸಭೆ,‌ ಆರೋಗ್ಯ ಇಲಾಖೆ ಭೇಟಿ ಹಾಗೂ ಪರಿಸರ ದಿನಾಚರಣೆ ಕಾರ್ಯಕ್ರಮವು ಜೂ 20ರಂದು ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿತ್ತು. ತಾಲೂಕು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ.ಫಾ.ಬಿನೋಯಿ ಎ.ಜೆ ಇಲಾಖಾ ಭೇಟಿ ಮೂಲಕ ಜಾಲಬಂಧ ಬೆಳೆಸುವ ಬಗ್ಗೆ ಮಾಹಿತಿ ನೀಡಿದರು

. ತಾಲೂಕು ಒಕ್ಕೂಟದ ಅಧ್ಯಕ್ಷರಾದ ಮಂಜುಳಾರವರು ಒಕ್ಕೂಟದ ವತಿಯಿಂದ ಮಾಡಬಹುದಾದ ಕೆಲಸಗಳ ಬಗ್ಗೆ ತಿಳಿಸಿದರು. ಬಳಿಕ ಸಮೂದಾಯ ಆರೋಗ್ಯ ಕೇಂದ್ರ ಬೆಳ್ತಂಗಡಿ ಇಲ್ಲಿಗೆ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳ ಬಗ್ಗೆ ತಾಲೂಕು ಆರೋಗ್ಯಾಧಿಕಾರಿ ಡಾ. ಸಂಜಾತ್ ರವರು ಮಾಹಿತಿ ನೀಡಿದರು. ಆರೋಗ್ಯ ಕೇಂದ್ರ ವಠಾರದಲ್ಲಿ ಹಣ್ಣಿನ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿ, ಸಂಯೋಜಕರಾದ ಶ್ರೀಮತಿ ಸಿಸಿಲ್ಯಾ ತಾವ್ರೊ, ಕಾರ್ಯಕರ್ತರಾದ ಮಾರ್ಕ್ ಡಿಸೋಜಾ ತಾಲೂಕು ಒಕ್ಕೂಟದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಶ್ರೀಮತಿ ಸಂಧ್ಯಾ ಎಲ್ಲರನ್ನು ಸ್ವಾಗತಿಸಿದರು. ಶ್ರೀಮತಿ ಮಂಜುಳಾ ವಂದಿಸಿದರು. ಪ್ರಾರ್ಥನೆ ಯನ್ನೂ ತಾಲೂಕು ಒಕ್ಕೂಟದ ಉಪಾಧ್ಯಕ್ಷೆ ಶ್ರೀಮತಿ ಜಿನ್ಸಿ ರಾಜೇಶ್ ಹಾಗೂ ಕಾರ್ಯದರ್ಶಿ ಉಷಾ ಇವರು ನೆರವೇರಿಸಿದರು.

Related posts

ಸೆ.22ರಂದು ನಡೆಯಲಿದ್ದ ಉಚಿತ ಬೃಹತ್ ಹೃದಯ ರೋಗ, ಕ್ಯಾನ್ಸರ್ ರೋಗ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಮುಂದೂಡಿಕೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಯಕ್ಷ ಭಾರತಿ.ರಿ ಸಂಸ್ಥೆಯಿಂದ ಲೇಖನ ಸಾಮಗ್ರಿಗಳ ವಿತರಣೆ

Suddi Udaya

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಪವರ್ ಮ್ಯಾನ್ ವಿಜೇಶ್ ಕುಟುಂಬಕ್ಕೆ ಕೆನಾರ ಬ್ಯಾಂಕ್‌ನಿAದ ೧ ಕೋಟಿ ರೂ. ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ

Suddi Udaya
error: Content is protected !!