September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜು: ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜೀವನ ಕೌಶಲ್ಯ ತರಬೇತಿ 

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಎನ್ ಎಸ್ ಎಸ್ ಸ್ವಯಂ ಸೇವಕರಿಗೆ  “ಜೀವನ ಕೌಶಲ್ಯ ತರಬೇತಿ”ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತರಬೇತುದಾರ  ಶ್ರೀಕಾಂತ್ ಪೂಜಾರಿರವರು ಹಾಗೂ ಜೀವನ ಕೌಶಲ್ಯ ತರಬೇತುದಾರರು ಮತ್ತು ಎಸ್ ಡಿ ಎಂ  ಕಾಲೇಜು  ಉಜಿರೆ ಇಲ್ಲಿನ ಎನ್ ಎಸ್ ಎಸ್ ಯೋಜನಾಧಿಕಾರಿಗಳಾದ  ಮಹೇಶ್ ಕುಮಾರ್ ಶೆಟ್ಟಿ, ಇವರು  ಜೀವನ ನಿರ್ವಹಣೆ, ಸವಾಲುಗಳನ್ನು ಎದುರಿಸುವ ಕುರಿತು ತರಬೇತಿ ನೀಡಿದರು.

ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ರವರು ” ಒಬ್ಬ ವ್ಯಕ್ತಿಯಲ್ಲಿ ಜೀವನ ಕೌಶಲ್ಯ  ಬಹಳ ಅವಶ್ಯಕ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿ ಕೂಡ ವಿದ್ಯಾರ್ಥಿ ದೆಸೆಯಲ್ಲಿಯೇ ಜೀವನದ ಸವಾಲುಗಳನ್ನು ಎದುರಿಸಿ ಬದುಕುವ ಕೌಶಲ್ಯ ಪಡೆದುಕೊಳ್ಳಬೇಕು” ಎಂದು ಹೇಳಿದರು.

ವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ರಾಜೇಶ್ ಬಿ, ಯೋಜನಾಧಿಕಾರಿಗಳಾದ ವಿಶ್ವನಾಥ್ ಎಸ್ ಉಪಸ್ಥಿತರಿದ್ದರು.

 ಸ್ವಯಂ ಸೇವಕಿ ಸುಪೇಕ್ಷಾ ನಿರೂಪಿಸಿ, ಸ್ವಯಂ ಸೇವಕ ವಿನೋದ್ ಸ್ವಾಗತಿಸಿ, ಸ್ವಯಂ ಸೇವಕಿ ದೀಪ್ತಿ ವಂದಿಸಿದರು.

Related posts

ಹೋಲಿ ರಿಡೀಮರ್ ಶಾಲಾ ಅಂಗಳದಲ್ಲಿ ಕೆಂಪು ಕಲರವ

Suddi Udaya

ಕಡಿರುದ್ಯಾವರ ದ. ಕ. ಜಿ. ಪಂ ಹಿ. ಪ್ರಾ ಶಾಲೆಯಲ್ಲಿ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

Suddi Udaya

ಬಂಟ್ವಾಳದಲ್ಲಿ ನಡೆದ ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧಮ೯ಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಸೆ. 14 – 21: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

Suddi Udaya
error: Content is protected !!