25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದಿಂದ ಆರೋಗ್ಯ ಇಲಾಖೆ ಭೇಟಿ ಹಾಗೂ ಪರಿಸರ ದಿನಾಚರಣೆ


ಬೆಳ್ತಂಗಡಿ : ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ಬೆಳ್ತಂಗಡಿ ಇದರ ಆಡಳಿತ ಮಂಡಳಿಯ ಸಭೆ,‌ ಆರೋಗ್ಯ ಇಲಾಖೆ ಭೇಟಿ ಹಾಗೂ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಜೂ.20 ರಂದು ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿತ್ತು.

ತಾಲೂಕು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಂಜುಳಾ ಅಧ್ಯಕ್ಷತೆಯನ್ನು ವಹಿಸಿ ಒಕ್ಕೂಟದ ವತಿಯಿಂದ ಮಾಡಬಹುದಾದ ಕೆಲಸಗಳ ಬಗ್ಗೆ ತಿಳಿಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ.ಫಾ.ಬಿನೋಯಿ ಎ.ಜೆ ಇಲಾಖಾ ಭೇಟಿ ಮೂಲಕ ಜಾಲಬಂಧ ಬೆಳೆಸುವ ಬಗ್ಗೆ ಮಾಹಿತಿ ನೀಡಿದರು.

ಬಳಿಕ ಸಮೂದಾಯ ಆರೋಗ್ಯ ಕೇಂದ್ರ ಬೆಳ್ತಂಗಡಿ ಇಲ್ಲಿಗೆ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳ ಬಗ್ಗೆ ತಾಲೂಕು ಆರೋಗ್ಯಾಧಿಕಾರಿ ಡಾ. ಸಂಜಾತ್ ರವರು ಮಾಹಿತಿ ನೀಡಿದರು. ಆರೋಗ್ಯ ಕೇಂದ್ರ ವಠಾರದಲ್ಲಿ ಹಣ್ಣಿನ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿ, ಸಂಯೋಜಕರಾದ ಶ್ರೀಮತಿ ಸಿಸಿಲ್ಯಾ ತಾವ್ರೊ, ಕಾರ್ಯಕರ್ತರಾದ ಮಾರ್ಕ್ ಡಿಸೋಜಾ ತಾಲೂಕು ಒಕ್ಕೂಟದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.


ಶ್ರೀಮತಿ ಸಂಧ್ಯಾ ಸ್ವಾಗತಿಸಿದರು. ಶ್ರೀಮತಿ ಮಂಜುಳಾ ವಂದಿಸಿದರು. ಪ್ರಾರ್ಥನೆ ಯನ್ನೂ ತಾಲೂಕು ಒಕ್ಕೂಟದ ಉಪಾಧ್ಯಕ್ಷೆ ಶ್ರೀಮತಿ ಜಿನ್ಸಿ ರಾಜೇಶ್ ಹಾಗೂ ಕಾರ್ಯದರ್ಶಿ ಉಷಾ ನೆರವೇರಿಸಿದರು.

Related posts

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya

ಉಜಿರೆ: ಶ್ರೀ. ಧ. ಮಂ. ಪ.ಪೂ. ಕಾಲೇಜಿನ ಸಂಸ್ಕೃತ ವಿಭಾಗದ ” ಸುಬೋಧಿನಿ ” ಡಿಜಿಟಲ್ ಭಿತ್ತಿಪತ್ರಿಕೆ ಬಿಡುಗಡೆ

Suddi Udaya

ವಿದ್ಯಾಮಾತಾದ ವಿದ್ಯಾರ್ಥಿಗಳಿಬ್ಬರು ಕೆ -ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಸುಲ್ಕೇರಿಮೊಗ್ರು ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ವಾರ್ಷಿಕ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಮತ್ತು ಕ್ರಿಸ್ಮಸ್ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಬರಾಜೆ ಅಂಗನವಾಡಿ ಕೇಂದ್ರದ ಆವರಣ ಗೋಡೆ ರಚನೆಗೆ ರೂ.30 ಸಾವಿರ ಅನುದಾನ

Suddi Udaya
error: Content is protected !!