September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಶ್ರೀ ರಾಮ ಪ್ರೌಢ ಶಾಲೆಯ ಪ್ರಾರಂಭೋತ್ಸವ

ಸುಲ್ಕೇರಿ: ಹಿಂದೂ ಧರ್ಮ, ಸಂಸ್ಕೃತಿಯನ್ನು ಉಳಿಸುವ ಕೆಲಸ ಶಿಕ್ಷಣ ಕ್ಷೇತ್ರದಿಂದ ಸಾಧ್ಯ. ಅಂತಹ ಕಾರ್ಯವನ್ನು ಶ್ರೀರಾಮ ಶಾಲೆ ಮಾಡುತ್ತಿದೆ. ಪೋಷಕರು, ಗ್ರಾಮಸ್ಥರು ಇದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.          

ಸುಲ್ಕೇರಿಯ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ  ಶ್ರೀರಾಮ ಪ್ರೌಢ ಶಾಲೆಯಲ್ಲಿ ಜೂ 19 ರಂದು  ನಡೆದ ಪ್ರವೇಶೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ವೇಳೆ ಶಿವಪ್ರಸಾದ್ ಅಜಿಲರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.


  ವೇದಿಕೆಯಲ್ಲಿ ಅಳದಂಗಡಿ ಸತ್ಯದೇವತೆ ದೈವಸ್ಥಾನದ ಆಡಳಿತದಾರ ಶಿವಪ್ರಸಾದ ಅಜಿಲ, ಕಾರ್ಕಳ ಕಮಲಾಕ್ಷ ಕಾಮತ್, ಕೆ.ಎಸ್.ಹೆಗ್ಡೆ ವೈದ್ಯಕೀಯ ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಡಾ| ಶ್ರೀಪಾದ ಜಿ. ಮೆಹೆಂದಳೆ, ನಾರಾವಿ ಸಿ.ಎ.ಬ್ಯಾಂಕಿನ ಅಧ್ಯಕ್ಷ ಸುಧಾಕರ ಭಂಡಾರಿ, ಶಿರ್ಲಾಲು ಸಿ.ಎ. ಬ್ಯಾಂಕ್ ಅಧ್ಯಕ್ಷ ಸುಧೀರ್ ಸುವರ್ಣ, ಶಾಲಾ ಆಡಳಿತ ಮಂಡಳಿ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ ನಾರಾವಿ, ಅಧ್ಯಕ್ಷ ರಾಜು ಪೂಜಾರಿ ,ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರಮೇಶ್ ಉಪಸ್ಥಿತರಿದ್ದರು.
ಪ್ರೌಢಶಾಲಾ ಮುಖ್ಯೋಪಾಧ್ಯಾಯ ಪ್ರಮೋದ್ ಕುಮಾರ್ ಸ್ವಾಗತಿಸಿ,  ಶಿಕ್ಷಕಿ ಶಶಿಕಲಾ ವಂದಿಸಿದರು. ಶಿಕ್ಷಕಿ ಹೇಮಲತಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ

Suddi Udaya

ಲಾಯಿಲ: ಪಡ್ಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್.ಆಯ್ಕೆ

Suddi Udaya

ಮಾ. 22 : ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ ಉಜಿರೆಯ ರಥಬೀದಿಯಲ್ಲಿ ಅದ್ದೂರಿಯ ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಲಯನ್ಸ್ ಸಂಸ್ಥೆ ವತಿಯಿಂದ ಆರ್ಥಿಕ ನೆರವು

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

Suddi Udaya
error: Content is protected !!