September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ : “ಪ್ರತಿನಿತ್ಯವೂ ಯೋಗ ಮಾಡುವ ಮೂಲಕ ಆರೋಗ್ಯ ವೃದ್ಧಿ ಹಾಗೂ ಮನಸ್ಸಿನ ನೆಮ್ಮದಿಯನ್ನು ಪಡೆಯಬಹುದು” ಎಂದು ಉಜಿರೆ ಎಸ್.ಡಿ.ಎಮ್ ಪ್ರಕೃತಿ ಮತ್ತು ಯೋಗ ವಿಜ್ಞಾನ ಕಾಲೇಜಿನ ಉಪ ಪ್ರಾಂಶುಪಾಲೆ ಡಾ.ಸುಜಾತ ಕೆ.ಜೆ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆ ಎಸ್.ಡಿ.ಎಮ್ ಪದವಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಯೋಗದ ಮಹತ್ವದ ಕುರಿತು ತಿಳಿಸಿದರು.

ಎಸ್.ಡಿ.ಎಮ್ ಪ್ರಕೃತಿ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಶಾಲಾ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ತರಬೇತಿ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ಶಿಕ್ಷಕಿ ಸವಿತಾ ವೇದ ಪ್ರಕಾಶ್ ನಿರೂಪಿಸಿ ಶಿಕ್ಷಕಿ ಶಮೀಮ್ ವಂದಿಸಿದರು.

Related posts

ಡಿ.29,30,31 ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶಾಸಕ ಹರೀಶ್ ಪೂಂಜರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

Suddi Udaya

ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.172 ಕೋಟಿ ವ್ಯವಹಾರ, ರೂ. 87 ಲಕ್ಷ ಲಾಭ, ಶೇ.4 ಡಿವಿಡೆಂಡ್

Suddi Udaya

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya
error: Content is protected !!