September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಮುಂಡಾಜೆ: ‘ಒಂದು ಭೂಮಿಗಾಗಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಧ್ಯೇಯ ವಾಕ್ಯದೊಂದಿಗೆ ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ & ರೇಂಜರ್ಸ್ ಘಟಕದ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಉಜಿರೆಯ ಶ್ರೀ.ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಹರ್ಷಿಣಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ‘ನಮ್ಮ ಮನಸ್ಸು ಮತ್ತು ದೇಹವನ್ನು ಹತೋಟಿಯಲ್ಲಿಡಲು ಯೋಗ ಉತ್ತಮವಾದ ವಿಧಾನ; ಪರಿಸರದೊಂದಿಗೆ ಅವಲಂಬಿತರಾದ ನಾವು ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಆರೋಗ್ಯಕ್ಕಾಗಿ ಪ್ರತಿದಿನ ಯೋಗಾಭ್ಯಾಸ ಮಾಡಬೇಕು’ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಗೀತಾ ಮಾತನಾಡಿ, ಯೋಗದ ಹಿನ್ನೆಲೆ ಹಾಗೂ ವಿದ್ಯಾರ್ಥಿಗಳಿಗೆ ಯೋಗದ ಪ್ರಸ್ತುತತೆಯನ್ನು ತಿಳಿಸಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ನಮಿತಾ ಕೆ ಆರ್ ಸ್ವಾಗತಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಶ್ರಾವ್ಯ ನಿರೂಪಿಸಿ, ನಳಿನಿ ಧನ್ಯವಾದಗೈದರು.


ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಯೋಗಪ್ರದರ್ಶನ ಹಾಗೂ ಶ್ಲೋಕ ಪಠಣ ನಡೆಯಿತು.

Related posts

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳ್ತಂಗಡಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya

ಬಹುಜನ ನೇತಾರ ಪಿ. ಡೀಕಯ್ಯರವರ ಬದುಕು -ಹೋರಾಟಗಳ ಸಂಸ್ಮರಣಾ ಕಾರ್ಯಕ್ರಮ

Suddi Udaya

ವಿಪರೀತ ಮಳೆ ಕಾರಣ ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

Suddi Udaya
error: Content is protected !!