September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉರುವಾಲು : ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಶಿಸ್ತಿನಿಂದ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ದೀಪ ಬೆಳಗಿ ಉದ್ಘಾಟಿಸಿ ಯೋಗಭ್ಯಾಸದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಬಳಿಕ ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ ಶಾಲಾ ದೈಹಿಕ ಶಿಕ್ಷಕಿ ಶ್ರೀಮತಿ ವಿಂದ್ಯಾ ಇವರು ಜೊತೆಗೂಡಿ ಒಂದು ಗಂಟೆಯ ಕಾಲ ಯೋಗದ ವಿವಿಧ ಆಸನಗಳನ್ನು ಪ್ರದರ್ಶಿಸಿ ಅವುಗಳ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳೆಲ್ಲರಿಗೂ ವಿವರಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೆಲ್ಲರೂ ಯೋಗದ ಕುರಿತಾಗಿ ಸಂಕಲ್ಪವನ್ನು ಕೈಗೊಂಡರು. ಈ ಸಂದರ್ಭದಲ್ಲಿ ಶಿಕ್ಷಕ ವೃಂದದವರು ಹಾಜರಿದ್ದರು.

Related posts

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವಾರ್ಷಿಕ ಮಹಾಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

Suddi Udaya

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

Suddi Udaya

ಅಂಡಿಂಜೆ: ಕೈಪಿಜಾಲು ಮನೆಯ ಹರೀಶ್ ಕೆ. ಆಚಾರ್ಯ ನಿಧನ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ: ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಆಮಂತ್ರಣ ಸೇವಾ ಪ್ರತಿಷ್ಠಾನ ಗೌರವ ಸಲಹೆಗಾರರಾಗಿ ಕಿರಣ್‌ಚಂದ್ರ ಡಿ.ಪುಷ್ಪಗಿರಿ

Suddi Udaya
error: Content is protected !!