ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಶಾಲಾ ಎಸ್.ಡಿ.ಎಂ.ಸಿ ಸದಸ್ಯೆ ಶ್ರೀಮತಿ ಪ್ರಮೀಳಾ ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಜರುಗಿತು. ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಯೋಗ ದಿನಾಚರಣೆಯ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಪೂರ್ಣಿಮಾ ಬಿ ಇವರು ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿ ವಿವಿಧ ಯೋಗಾಸನಗಳನ್ನು ವಿದ್ಯಾರ್ಥಿಗಳಿಂದ ಮಾಡಿಸಿದರು. ಶಾಲಾ ಎಸ್‌ಡಿಎಂಸಿ ಸದಸ್ಯರು, ಅಧ್ಯಾಪಕ ವೃಂದ ಅಡುಗೆ ಸಿಬ್ಬಂದಿಯವರು ಭಾಗವಹಿಸಿದ್ದರು. ಸಹ ಶಿಕ್ಷಕಿ ಪ್ರಮೀಳಾ ವಂದಿಸಿದರು.











