ವೇಣೂರು:ಅಕ್ರಮವಾಗಿ ದಿನಸಿ ಅಂಗಡಿಯಲ್ಲಿ ಮದ್ಯ ದಾಸ್ತಾನು ಹಾಗೂ ಮಾರಾಟ ಮಾಡುತ್ತಿದ್ದ ಗುಂಡೂರಿ ಅಂಗಡಿ ಮಾಲೀಕನನ್ನು ವೇಣೂರು ಪೊಲೀಸರು ಬಂಧಿಸಿ ಕೇಸು ದಾಖಲಿಸಿಕೊಂಡ ಬಗ್ಗೆ ಜೂ. 20 ರಂದು ವರದಿಯಾಗಿದೆ.
ಪೋಲೀಸರು ಸಿಬ್ಬಂದಿಯವರೊಂದಿಗೆ ಇಲಾಖಾ ವಾಹನದಲ್ಲಿ ಬಜಿರೆ ಎಂಬಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ಬೆಳ್ತಂಗಡಿ ತಾಲೂಕು ಗುಂಡೂರಿ ಗ್ರಾಮದ ಗುಂಡೂರಿ ಬಳಿ ಇರುವ ದಿನಸಿ ಅಂಗಡಿಯಲ್ಲಿ ಹರೀಶ್ ಎಂಬಾತನು ಅಕ್ರಮವಾಗಿ ಮದ್ಯವನ್ನು ದಾಸ್ತಾನು ಇರಿಸಿ ಮಾರಾಟ ಮಾಡುತ್ತಿರುವುದಾಗಿ ದೊರೆತ ಖಚಿತ ಮಾಹಿತಿಯಂತೆ ಪೋಲಿಸರು ಗೆ ದಾಳಿ ನಡೆಸಿ ಅಂಗಡಿಯಲ್ಲಿದ್ದ ಒಂದು ಪ್ಲಾಸ್ಟಿಕ್ ಚೀಲದಲ್ಲಿ 90 ML ಸಾಮರ್ಥ್ಯದ 44 ಮದ್ಯ ತುಂಬಿದ ಸ್ಯಾಚೆಟ್‌ಗಳನ್ನು ಅಕ್ರಮವಾಗಿ ದಾಸ್ತಾನು ಇರಿಸಿಕೊಂಡಿರುವುದನ್ನು ಪತ್ತೆ ಹಚ್ಚಿದ್ದಾರೆ.
ಪತ್ತೆ ಹಚ್ಚಲಾದ ಮದ್ಯದ ಒಟ್ಟು ಪ್ರಮಾಣ 3.960 ಲೀಟರ್ ಆಗಿದ್ದು, ಅಂದಾಜು ಮೌಲ್ಯ ರೂ 1760/- ಆಗಿರುತ್ತದೆ. ಈ ಬಗ್ಗೆ ವೇಣೂರು ಪೋಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.











