ಬೆಳ್ತಂಗಡಿ; ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ಎಂಬುವರು ನೊಂದವರಿಗೆ ಸಹಾಯ ಮಾಡುತ್ತಿರುವುದಾಗಿ ಹೇಳಿ ಪ್ರಕರಣವೊಂದನ್ನು ಬಗೆ ಹರಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಿದ ಆರೋಪದಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಡಂತ್ಯಾರ್‌ನ ನಿವಾಸಿ ಕೆ.ರಾಜೇಶ್ ಎಂಬುವರು ನೀಡಿದ ದೂರಿನ ಅನ್ವಯ ಈ ಪ್ರಕರಣ ದಾಖಲಾಗಿದೆ. ದೂರುದಾರ ರಾಜೇಶ್ ಅವರಿಗೆ ಸಂಧ್ಯಾ 2024ರಲ್ಲಿ ಫೇಸ್ಟುಕ್ ಮೂಲಕ ಪರಿಚಯವಾಗಿದ್ದಾಳೆ. ತಾನು ನೊಂದವರ ಹಾಗೂ ವಂಚನೆಗೊಳಗಾದವರಿಗೆ ನೆರವಾಗುತ್ತಿದ್ದೇನೆ. ಎಂದು ರಾಜೇಶ್ ಅವರಿಗೆ ನಂಬಿಸಿದ್ದಾಳೆ.
ಆಗ, ರಾಜೇಶ್ ಅವರು ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಬಗ್ಗೆ ಸಂಧ್ಯಾ ಪವಿತ್ರ ನಾಗರಾಜ್‌ಗೆ ತಿಳಿಸಿದ್ದಾರೆ. ಆಗ, ಸಂಧ್ಯಾ ಇದನ್ನು ಬಗೆಹರಿಸುತ್ತೇನೆ, ಆದರೆ, ಸ್ವಲ್ಪ ಖರ್ಚು ಇದೆ ಎಂದಿದ್ದಾಳೆ. ನಂತರ, ರಾಜೇಶ್ ಅವರಿಂದ ಸಂಧ್ಯಾ ಹಂತ ಹಂತವಾಗಿ 3.20 ಲಕ್ಷ ರೂ. ಪಡೆದಿದ್ದಾಳೆ. ಹಣ ನೀಡಿದ ನಂತರವೂ ಸಮಸ್ಯೆ ಬಗೆಹರಿಯದ ಕಾರಣ ರಾಜೇಶ್ ಅವರು ಸಂಧ್ಯಾಗೆ ಪ್ರಶ್ನಿಸಿದ್ದಾರೆ.ಆಗ, ಸಂಧ್ಯಾ ಇನ್ನೂ ಹೆಚ್ಚಿನ ಹಣ ನೀಡುವಂತೆ ಹೇಳಿದ್ದಾರೆ .ಸಂಧ್ಯಾ ಮಾತು ಕೇಳಿ ಸಂಶಯಗೊಂಡ ರಾಜೇಶ್ ಅವರು ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಿಎನ್‌ಎಸ್ ಕಾಯ್ದೆ 318(4) ಮತ್ತು 351(2) ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.











