ಮಚ್ಚಿನ: ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಲಡ್ಕದಿಂದ ಪಲ್ಲೆಕೋಡಿ ಕಡೆಗೆ ಹೋಗುವ ರಸ್ತೆ ಕೆಸರುಮಯವಾಗಿದ್ದು ಓಡಾಟ ಶೋಚನೀಯವಾಗಿದೆ. ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಳೆಗಾಲ ಆರಂಭದಲ್ಲಿ ಗ್ರಾಮೀಣ ಭಾಗದ ರಸ್ತೆಗಳು ಲಗಾಡಿಯಾಗಿದೆ. ಈ ರಸ್ತೆ ಕೆಸರುಮಯಗೊಂಡಿದ್ದು ನಡೆದುಕೊಂಡು ಹೋಗಲು ಸಾರ್ವಜನಿಕರು ಸಹಿತ ವಿದ್ಯಾರ್ಥಿಗಳು ಹರಸಾಹಸ ಪಡುತ್ತಿದ್ದಾರೆ. ಇನ್ನೂ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ, ಸ್ಥಳೀಯ ಆಡಳಿತ ಶೀಘ್ರವೇ ಈ ಸಮಸ್ಯೆ ಸರಿದೂಗಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.











