September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅನುಗ್ರಹ ಶಾಲೆಯಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆ.

ಉಜಿರೆ : ಅನುಗ್ರಹ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಶಾಲಾ ಸಭಾಭವನದಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆಯನ್ನು ಒಂದು ಭೂಮಿ ಒಂದು ಆರೋಗ್ಯ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಯಿತು.


ಸಂಸ್ಥೆಯ ಪ್ರಾಂಶುಪಾಲ ಫಾ!ವಿಜಯ್ ಲೋಬೋ ಅವರು ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ವೈದ್ಯರಾದ ಡಾ.ಅಬಿಟೋನ್ ಹಾಗೂ ಶಾರೀರಿಕ ಶಿಕ್ಷಕರಾದ ವಸಂತ ಹೆಗ್ಢೆ ಹಾಗು ನಿಶ್ಚಿತ್ ಅವರ ಜೊತೆಗೂಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಖ್ಯ ಅತಿಥಿ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಕಾಲೇಜಿನ ವೈದ್ಯರಾದ ಡಾ.ಅಬಿಟೋನ್, ತಮ್ಮ ಸಂದೇಶದಲ್ಲಿ ಯೋಗವನ್ನು ತಮ್ಮ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಯಾವ ರೀತಿ ಜೀವನ ಶೈಲಿಯನ್ನು ಸುಧಾರಿಸಬಹುದು ಎಂದು ಹೇಳಿದರು. ಪ್ರಾಂಶುಪಾಲರು ತಮ್ಮ ಮಾತಿನಲ್ಲಿ ಇಂದು ಯೋಗದ ಕುರಿತು ಕೇವಲ ಭಾರತ ಮಾತ್ರವಲ್ಲ ಜಗತ್ತೇ ಮಾತನಾಡುತ್ತಿದೆ. ಆಧುನಿಕತೆಯ ಭರಾಟೆಯ ನಡುವೆ ಯೋಗದ ಮಹತ್ವವನ್ನು ವಿದೇಶಿಯರು ಅರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಈ ಮೂರು ದಿನದ ಯೋಗ ತರಬೇತಿಯನ್ನು ಧರ್ಮಸ್ಥಳ ನ್ಯಾಚುರೋಪತಿ ಕಾಲೇಜಿನ ವೈದ್ಯವಿದ್ಯಾರ್ಥಿಗಳಾದ ಸುಪ್ರಿತಾ ಭಟ್, ಪ್ರಕೃತಿ, ಸಾರಂಗಿರವರ ಮಾರ್ಗದರ್ಶನದಲ್ಲಿ ಯೋಗ ಪ್ರಾತ್ಯಕ್ಷಿತೆ ನಡೆಯಿತು. ಹಿರಿಯ ಶಿಕ್ಷಕಿ ವಿನಯಲತಾ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿಯ ಹಿರಿಯ ಹೊಟೇಲ್ ಉದ್ಯಮಿ ಅಬೂಬಕ್ಕರ್ ಹೃದಯಾಘಾತದಿಂದ ನಿಧನ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳದ  ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಜು. 12: ಉಜಿರೆಯಲ್ಲಿ ಮೆಗಾ ‘ರೈನಾಥಾನ್–2026’

Suddi Udaya

ಕುವೆಟ್ಟು: ಸ.ಹಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ವೇಣೂರು : ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ರಾಜ್ಯಮಟ್ಟದ ನೃತ್ಯ ಸ್ಪರ್ಧೆ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ದ್ವಿತೀಯ ಸ್ಥಾನ

Suddi Udaya
error: Content is protected !!