25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ)ಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

ಉಜಿರೆ: “ಕಠಿಣ ಪರಿಶ್ರಮ ಮತ್ತು ಬುದ್ಧಿವಂತಿಕೆಯಿಂದ ಕೆಲಸ ಮಾಡಬೇಕು. ಯಶಸ್ಸನ್ನು ಸಾಧಿಸುವ ಹಸಿವು ಸದಾ ಇರಬೇಕು.” ಎಂದು ಶ್ರೀ ಧರ್ಮಸ್ಥಳದ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಕೆ.ಎನ್ ಜನಾರ್ಧನ ಇವರು ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆ ಇಲ್ಲಿ ನಡೆದ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವೇದಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ, ಹಳೆ ವಿದ್ಯಾರ್ಥಿ ಹಾಗೂ ಶಾಲಾ ನಾಯಕನಾಗಿದ್ದ ಪ್ರಾಂಜಲ್ ಶೆಟ್ಟಿ ಹಾಗೂ ಪ್ರಸ್ತುತ ಶಾಲಾ ನಾಯಕನಾಗಿ ಆಯ್ಕೆಗೊಂಡಿರುವ ಸಿಯೋನ್ ರಾಜ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಶಶಾಂಕ್ ಮತ್ತು ಕ್ರಿಸ್ಟಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿ ಚಿಂತನ್ ವಂದಿಸಿದರು.

Related posts

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಬೆಂದ್ರಾಳ ಸೈಂಟ್ ಸಾವಿಯೋ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಲ್ಲೇರಿ ಐಸಿರಿ ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ ಮತ್ತು ಶ್ರಮದಾನ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

Suddi Udaya

ಕೊಕ್ಕಡ: ಮುಂಡೂರುಪಳಿಕೆ ಸ.ಕಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!