25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಡಗಕಾರಂದೂರು ಸ.ಹಿ.ಪ್ರಾ, ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

ಅಳದಂಗಡಿ : ಶ್ರೀ, ಕ್ಷೇ, ಧ, ಗ್ರಾ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಸ, ಹಿ, ಪ್ರಾ, ಶಾಲೆ ಬಡಗಕಾರಂದೂರು ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ ಪರಿಸರ ಮಾಹಿತಿ ಗಿಡ ನಾಟಿ ಕಾರ್ಯಕ್ರಮವನ್ನು ಅರಣ್ಯಾಧಿಕಾರಿ ಹರಿಪ್ರಸಾದ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಇಲಾಖೆಯಿಂದ ಸಿಗುವ ಗಿಡಗಳನ್ನು ಉತ್ತಮ ರೀತಿಯಲ್ಲಿ ರಕ್ಷಿಸಿ ಬೆಳೆಸಬೇಕು ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಹಾಗೂ ಪ್ಲಾಸ್ಟಿಕ್ ನಿಂದ ಪರಿಸರಕ್ಕೆ ಆಗುವ ತೊಂದರೆಗಳ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶಾಲಾ ಶಿಕ್ಷಕಿಯಾದ ಶಾಂತಿ ನಾಯಕ್ ರವರು ಮಾತನಾಡಿ ಅರಣ್ಯ ನಾಶದಿಂದ ಜಾಗತಿಕ ತಾಪಮಾನ ಹೆಚ್ಚಾಗಲು ಕಾರಣವಾಗುತ್ತಿದೆ ಹಲವು ಅಪರೂಪದ ಸಸ್ಯ ಹಾಗೂ ಪ್ರಾಣಿ ಸಂಕುಲಗಳು ಅಳಿವಿನಂಚಿಗೆ ಬಂದಿದೆ ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಬರುವ ದಿನಗಳಲ್ಲಿ ಎಲ್ಲೆಡೆ ಹಸಿರುಮಯವಾಗುತ್ತದೆ ಹಾಗೂ ಪರಿಸರಮಾಲಿನ್ಯದಿಂದ ಉಂಟಾಗುವ ಸಮಸ್ಯೆ, ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಮಾತನಾಡಿ ನಮ್ಮ ಪೂರ್ವಜರು ನಮಗೆ ಉಳಿಸಿಟ್ಟಿರುವ ಅರಣ್ಯವನ್ನು ಮನುಷ್ಯ ತಮ್ಮ ಅಭಿವೃದ್ಧಿ ಕೆಲಸಕಾರ್ಯಗಳಿಗೆ ನಾಶ ಮಾಡುವ ಮೂಲಕ ಪರಿಸರದ ಅವನತಿಗೆ ಕಾರಣವಾಗುತ್ತಿದ್ದೇವೆ ನೈಸರ್ಗಿಕ ಸಂಪನ್ಮೂಲಗಳು ಖಾಲಿ ಮಾಡುವ ಮುನ್ನ ಅದರ ಎರಡರಷ್ಟು ಬೆಳವಣಿಗೆ ಮಾಡಬೇಕೆಂದು ಮಾಹಿತಿ ನೀಡಿದರು.

ಎ ಒಕ್ಕೂಟದ ಅಧ್ಯಕ್ಷ ಹರೀಶ್ ಸಾಲಿಯನ್ ರವರು ಗಿಡ ನಾಟಿ ಮಾಡುವ ಮೂಲಕ ನಾಟಿಗೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಕೃಷಿ ಮೇಲ್ವಿಚಾರಕರು ಕೃಷ್ಣ ವಲಯದ ಮೇಲ್ವಿಚಾರಕಿ ಶ್ರೀಮತಿ ಯಶೋಧ, ಎ ಹಾಗೂ ಬಿ ಒಕ್ಕೂಟದ ಮಾಜಿ ಅಧ್ಯಕ್ಷ ಹರೀಶ್ ಆಚಾರ್ಯ, ಮಂಜುನಾಥ ಆಚಾರ್ಯ, ಶಾಲಾ ಮುಖ್ಯೋಪಾಧ್ಯಾಯ ಸುರೇಶ್ ಒಕ್ಕೂಟದ ಕಾರ್ಯದರ್ಶಿಯಾದ ಶ್ರೀನಿವಾಸ್ ಆಚಾರ್ಯ ಹಾಗೂ ಸದಾನಂದ ಸೇವಾ ಪ್ರತಿನಿಧಿ ಪೂರ್ಣಿಮಾ ಪ್ರಮೋದ, ಶುಭಲತಾ ವಿಪತ್ತು ತಂಡದ ಸಂಯೋಜಕಿ ಹರಿಣಾಕ್ಷಿ, ಸದಸ್ಯರಾದ ಶಕುಂತಲಾ, ಹೇಮಾವತಿ, ನಮಿತಾ, ಅಮಿತ್ ರವರು ಗಿಡ ನಾಟಿ ಮಾಡಿದರು. ಶಾಲಾ ಶಿಕ್ಷಕರು ಪ್ರಗತಿ ಬಂಧು ತಂಡದ ಸದಸ್ಯರು ಜಗನ್ನಾಥ ಹಾಗೂ ಊರಿನ ಗಣ್ಯರು ಶಾಲೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಬಂದಾರು ಪರಿಸರದಲ್ಲಿ ಗಜ ಹೆಜ್ಜೆ: ಒಂದುವಾರದಿಂದ ಒಂಟಿಸಲಗದ ಸಂಚಾರ

Suddi Udaya

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

Suddi Udaya

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ “ಅಲೀಫ್ ಡೇ” ಸಮಾರಂಭ

Suddi Udaya

ಬೆಳ್ತಂಗಡಿಯಲ್ಲಿ ಪೇಪರ್ ಲೇಸ್ ರಿಜಿಸ್ಟ್ರೇಷನ್ ತರಬೇತಿ

Suddi Udaya
error: Content is protected !!