23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತ ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ. 21 ರಂದು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ನೆರವೇರಿಸಲಾಯಿತು.

ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭಿಸಲಾಯಿತು. ವಿದ್ಯಾರ್ಥಿನಿಯಾದ ಧನ್ವಿತರವರು ಯೋಗ ದಿನಾಚರಣೆಯ ಮಹತ್ವದ ಬಗ್ಗೆ ವಿವರಣೆ ನೀಡಿದರು. ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕರಾದ ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ರವರು ಆಗಮಿಸಿದ್ದರು. ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ಯೋಗವು ನಮ್ಮ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ಹೆಚ್ಚಿಸುತ್ತದೆ, ನಾವು ಪ್ರತಿದಿನ ಯೋಗ ಮಾಡಬೇಕು ಎಂದು ಹೇಳಿ ವಿದ್ಯಾರ್ಥಿಗಳಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೋ ಡೇಸ ರವರು, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಶೇಕ್ ಮಹಮ್ಮದ್ ಶಯಾಫ್ ರವರು ನಿರೂಪಿಸಿ, ಮನಸ್ವಿ ಸ್ವಾಗತಿಸಿ, ಅಚಿಂತ್ಯ ಶಂಕರ ಧನ್ಯವಾದವಿತ್ತರು.

Related posts

ಸಹಾಯ ಹಸ್ತ –ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರಿಂದ ತಯಾರಿಸಲಾದ ಉತ್ಪನ್ನಗಳ ಮಾರಾಟ ಯೋಜನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya

ಬೆಳ್ತಂಗಡಿ ತಾಲೂಕು 18ನೇಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಪಡಂಗಡಿ: ಕರುವಿನ ಮೇಲೆ ಚಿರತೆ ದಾಳಿ

Suddi Udaya
error: Content is protected !!