32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡ್ರುಪ್ಪಾಡಿ ಸ. ಕಿ. ಪ್ರಾ. ಶಾಲೆಗೆ ಹರೀಶ್ ರಾವ್ ಮುಂಡ್ರುಪ್ಪಾಡಿಯವರಿಂದ 5 ಡೆಸ್ಕ್ ಕೊಡುಗೆ

ಮುಂಡ್ರುಪ್ಪಾಡಿ ಸ. ಕಿ. ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಹಾಗೂ ಶಾಲಾ ಮಾರ್ಗದರ್ಶಕ ಹರೀಶ್ ರಾವ್ ಮುಂಡ್ರುಪ್ಪಾಡಿಯವರು ಶಾಲಾ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ 5 ಡೆಸ್ಕ್ ಗಳನ್ನು ಶಾಲೆಗೆ ಕೊಡುಗೆಯಾಗಿ ನೀಡಿದರು.

ಮುಖ್ಯ ಅತಿಥಿಗಳಾಗಿ 1968 ನೇ ಸಾಲಿನಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ ಶ್ರೀಧರ್ ರಾವ್ ರವರು ಡೆಸ್ಕ್ ಗಳನ್ನು ಶಾಲಾ ಮುಖ್ಯ ಶಿಕ್ಷಕರಿಗೆ ಹಸ್ತಾಂತರಿಸಿದರು ಹಾಗೂ ರೂ. 5,000 ಅಭಿವೃದ್ಧಿ ಕಾರ್ಯಗಳಿಗೆ ದೇಣಿಗೆ ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಸ್ಥಾಪಕಧ್ಯಕ್ಷರ ಪುತ್ರರಾದ ನಾಗೇಶ್ ರಾವ್ ಮುಂಡ್ರುಪ್ಪಾಡಿ , ಕ್ಲಸ್ಟರ್ ನ ಸಿಆರ್ ಪಿ ಯವರಾದ ಶ್ರೀಮತಿ ಪ್ರತಿಮಾ , ಹಿರಿಯ ವಿದ್ಯಾರ್ಥಿ ಮಧುಸೂಧನ್, ಎಸ್.ಡಿ.ಮ್,ಸಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ಪೋಷಕರು ಹಾಗೂ ಡೆಸ್ಕ್ ಗಳನ್ನು ತಯಾರಿಸಿದ ಉದಯ್ ಆಚಾರ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮನಿಧಿ ಯೋಜನೆಯ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ: ಹಳೇಕೋಟೆ ಬಳಿ ಪಿಕಪ್ ಮತ್ತು ದ್ವಿಚಕ್ರ ವಾಹನ ಅಪಘಾತ ಪ್ರಕರಣ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Suddi Udaya

ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ 2025-27ನೇ ಸಾಲಿನ ಪದಪ್ರದಾನ ಸಮಾರಂಭ

Suddi Udaya

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಶಾಲಾ ಮಕ್ಕಳಿಗೆ ಬೇಸಿಗೆ ಶಿಬಿರ

Suddi Udaya

ಉಜಿರೆ: ಸಿಡಿಲು ಬಡಿದು ಮನೆ ವಿದ್ಯುತ್ ವಯರಿಂಗ್ ಹಾನಿ

Suddi Udaya
error: Content is protected !!