September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಇಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಮಾದರಿ ಮೂಲಕ ಶಾಲಾ ನಾಯಕ ಮತ್ತು ಉಪನಾಯಕ ಚುನಾವಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ನಾಯಕ ಮತ್ತು ಉಪನಾಯಕ ಸ್ಥಾನಕ್ಕೆ ಮತದಾನವು ಜೂ. 19 ರಂದು ನಡೆಯಿತು.

ಈ ಶೈಕ್ಷಣಿಕ ವರ್ಷದ ಮತದಾನವು ಇಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಮಾದರಿ ಮೂಲಕ ನೆರವೇರಿತು. ಹೋಲಿ ರೇಡಿಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ಕ್ಲಿಫರ್ಡ್ ಸೈಮನ್ ಪಿಂಟೋ ರವರು ಹಾಗೂ ಸಹಶಿಕ್ಷಕಿಯರಾದ ಪ್ರೀತ ಡಿಸೋಜ ಮತ್ತು ವಿನಿತಾ ಮೋರಸ್ ರವರು ಇಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ನಲ್ಲಿ ಓಟು ಹಾಕುವ ಬಗ್ಗೆ ಮಾರ್ಗದರ್ಶನ ನೀಡಿ ಸಹಕರಿಸಿದರು.


ಶಾಲಾ ನಾಯಕನ ಸ್ಥಾನಕ್ಕೆ 10ನೇ ತರಗತಿಯ ಒಟ್ಟು 2 ವಿದ್ಯಾರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ದರು. ಉಪನಾಯಕ ಸ್ಥಾನಕ್ಕೆ 9ನೇ ತರಗತಿಯ ಒಟ್ಟು8 ವಿದ್ಯಾರ್ಥಿಗಳು ನಾಮಪತ್ರವನ್ನು ಸಲ್ಲಿಸಿದರು.10ನೇ ತರಗತಿಯ ಜೇಡನ್ ಕೀತ್ ಡಿಕುನ್ಹ ಶಾಲಾ ನಾಯಕನಾಗಿ ಹಾಗೂ 9ನೇ ತರಗತಿಯ ವೈಭವ್ ಆರ್ ಉಪನಾಯಕನಾಗಿ ಬಹುಮತದಿಂದ ಆಯ್ಕೆಯಾದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೋ ಡೇಸರವರು ಈ ಶೈಕ್ಷಣಿಕ ವರ್ಷದ ಮತದಾನವು ಇಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಮೂಲಕ ನಡೆಸಲು ಉತ್ತೇಜಿಸಿದರು. ಶಾಲಾ ಶಿಕ್ಷಕ ವೃಂದದವರು, ಚುನಾವಣೆಯು ಉತ್ತಮವಾಗಿ ನೆರವೇರಲು ಸಹಕರಿಸಿದರು. ಶಾಲಾ ಸ್ಕೌಟ್ ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ಬರಲು ಶಿಸ್ತನ್ನು ಕಾಪಾಡಿದರು.

Related posts

ಕೊಕ್ಕಡ: EduNest ಅಕಾಡೆಮಿ ಕೋಚಿಂಗ್ ಕೇಂದ್ರ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಲಾಯಿಲ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ನೇಮೊತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!